ದಾವಣಗೆರೆ, ನ.6- ಜಿಲ್ಲಾ ನ್ಯಾಯಾಂಗ ಇಲಾಖೆಯ ವಿವಿಧೋದ್ದೇಶ ಸಹಕಾರ ಸಂಘದ 14ನೇ ವಾರ್ಷಿಕ ಮಹಾಸಭೆಯಲ್ಲಿ ಹೈಕೋರ್ಟ್ ನ್ಯಾಯಾಂಗ ಸೊಸೈಟಿಯ ಚುನಾವಣೆಯಲ್ಲಿ ಅತ್ಯಧಿಕ ಮತವನ್ನು ಪಡೆದು, ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿ ದಾವಣಗೆರೆಯಿಂದ ಪ್ರಪ್ರಥಮ ಬಾರಿಗೆ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಿರುವ ಮನೋಹರ್ ಅವರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಹೆಗಡೆ ಅವರು ಸನ್ಮಾನ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ಆಡಳಿತ ಅಧಿಕಾರಿ ಶ್ರೀನಿವಾಸ್, ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ ಕುಮಾರ್, ಸೊಸೈಟಿ ಅಧ್ಯಕ್ಷ ಶಂಕರ್ ಮೂರ್ತಿ, ಉಪಾಧ್ಯಕ್ಷ ಶೇಖರಪ್ಪ ಹಾಗೂ ಸದಸ್ಯರಾದ ಕರಿಸಿದ್ದಪ್ಪ, ಹನುಮಂತಮ್ಮ ಕೃಷ್ಣಮೂರ್ತಿ, ಜಗನ್ನಾಥ್, ಸುಭಾನ್, ಕೊಟ್ರೇಶ್ ಮತ್ತಿತರರಿದ್ದರು.