ಪಡಿತರ ಧಾನ್ಯ ತೂಕದ ವ್ಯತ್ಯಾಸ ಪರಿಶೀಲಿಸಿ

ಪಡಿತರ ಧಾನ್ಯ ತೂಕದ ವ್ಯತ್ಯಾಸ ಪರಿಶೀಲಿಸಿ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್

ದಾವಣಗೆರೆ, ನ.7- ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯಗಳ ವಿತರಣೆಯಲ್ಲಿ ಆಗುವ ತೂಕದ ವ್ಯತ್ಯಾಸ, ಆಹಾರ ಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ ಮಾತನಾಡುತ್ತಾ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ನಾಗರಿಕರಿಗೂ ಸಿಗುವಂತಾಗಬೇಕು.  

ಈ ಯೋಜನೆಗಳು ಯಾರಿಗೆ ತಲುಪುತ್ತಿಲ್ಲ, ಅಂತವರಿಗೆ ಈಗಾಗಲೇ ಅರಿವು ಕಾರ್ಯಕ್ರಮ ಮಾಡಲಾಗಿದೆ. ಇನ್ನೂ ವೇಗವಾಗಿ ಕಾರ್ಯನಿರ್ವ ಹಿಸಲಾಗುವುದು ಎಂದು ತಿಳಿಸಿದರು.

ಅನ್ಯಭಾಗ್ಯ ಯೋಜನೆಯಡಿ  ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ  ಟಿ.ಬಸವರಾಜ್‌ರವರು ತಹಶೀಲ್ದಾರರು ಹಾಗೂ ಉಪ ವಿಭಾಗಾಧಿಕಾರಿಗಳು ಜಂಟಿಯಾಗಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಪಡಿತರ ವಿತರಣೆ, ಪಡಿತರ ಧಾನ್ಯಗಳ ವಿತರಣೆಯಲ್ಲಿ ಆಗುವ ತೂಕದ ವ್ಯತ್ಯಾಸ, ಆಹಾರ ಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡಲು ಸೂಚಿಸಿದರು.

ಸದಸ್ಯರಾದ ಶಶಿಕಲಾಮೂರ್ತಿ ಎಂ.ಜಿ, ಸುಭಾನ್‌ಸಾಬ್, ಎಸ್.ಎಸ್ ಗಿರೀಶ್, ಡೋಲಿ ಚಂದ್ರು, ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರುಗಳಾದ  ನಂಜಾನಾಯ್ಕ, ಹನೀಪ್ ಷಾ ಹಾಗೂ ಅನುಷ್ಠಾನ ಸಮಿತಿಯ ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು.

error: Content is protected !!