ಆರ್ಯ ವೈಶ್ಯ ಅಭಿವೃದ್ಧಿ ನಿಗಮದಿಂದ ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ

 ದಾವಣಗೆರೆ,ನ.6-  ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಸಿ.ಇ.ಟಿ, ಹಾಗೂ ಎನ್.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿ ದರದಲ್ಲಿ  ನೀಡಲಾಗುವುದು.

18 ರಿಂದ 35 ವರ್ಷದ ಒಳಗಿನವರಾಗಿದ್ದು, ಕುಟುಂಬದ ವಾರ್ಷಿಕ ಆದಾಯ ರೂ.6 ಲಕ್ಷಗಳ ಮಿತಿಯೊಳಗಿರಬೇಕು. 

ವಿದ್ಯಾಭ್ಯಾಸ ಪೂರ್ಣಗೊಂಡ 4 ತಿಂಗಳ  ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಆಸಕ್ತರು ಡಿಸೆಂಬರ್ 15 ರೊಳಗಾಗಿ kacdc.karnataka.gov.ind  ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 08192230934 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕಿ ರೂಪ ಎಸ್.ಟಿ ತಿಳಿಸಿದ್ದಾರೆ.

error: Content is protected !!