ಉತ್ತರದ ಬಾಷಾ, ಸಂಸ್ಕೃತಿ ಬಲವಂತದ ಹೇರಿಕೆ ವಿಷಾದನೀಯ

ಉತ್ತರದ ಬಾಷಾ, ಸಂಸ್ಕೃತಿ ಬಲವಂತದ ಹೇರಿಕೆ ವಿಷಾದನೀಯ

ದಾವಣಗೆರೆ ವಿವಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ

ದಾವಣಗೆರೆ, ನ. 7- ಉತ್ತರ ಭಾರತದ ಸಂಸ್ಕೃತಿ ಮತ್ತು ಭಾಷೆಯನ್ನು ದಕ್ಷಿಣ ರಾಜ್ಯಗಳ ಮೇಲೆ ಬಲವಂತವಾಗಿ ಹೇರುತ್ತಿರುವುದು ವಿಷಾದನೀಯ ಸಂಗತಿ ಎಂದು ನಾಡಿನ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಅಭಿಪ್ರಾಯಪಟ್ಟರು.

ದಾವಣಗೆರೆ ವಿಶ್ವವಿದ್ಯಾನಿಲಯದ ಎಂಬಿಎ ಸಭಾಂಗಣದಲ್ಲಿ ಗುರುವಾರ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ, ದ್ರಾವಿಡ ಭಾಷೆಗಳಲ್ಲಿ ಅತ್ಯಂತ ಶ್ರೀಮಂತ ಭಾಷೆಯಾಗಿದೆ. ಕನ್ನಡ ಭಾಷೆಗೆ ಯಾವತ್ತೂ ಅಳಿವಿಲ್ಲ, ಆದರೆ ಕನ್ನಡ ಅಧ್ಯಯನಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲದಿರುವುದು ಕನ್ನಡ ಭಾಷೆಯ ದುರದೃಷ್ಟ ಎಂದರು.

ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳ ಕನ್ನಡ ವಿಭಾಗಕ್ಕೆ ಪೂರ್ಣ ಪ್ರಮಾಣದ ಶಿಕ್ಷಕರು ಹಾಗೂ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು. ಕನ್ನಡ ಜೀವನದ ಮೌಲ್ಯಗಳನ್ನು ಹೇಳಿಕೊಡುವ ಅಮೂಲ್ಯ ಭಾಷೆ. ಕನ್ನಡ ಮಾಧ್ಯಮದಲ್ಲಿ ಓದಿರುವ ವಿದ್ಯಾರ್ಥಿಗಳೇ ಇಂದು ರಾಜ್ಯದಲ್ಲಿ ಉನ್ನತ ಸ್ಥಾನದಲ್ಲಿರುವುದು ಸಂತಸದ ವಿಷಯ ಎಂದರು.

ಪ್ರತಿಯೊಬ್ಬರನ್ನು ಗೌರವಿಸುವ ಸಂಸ್ಕೃತಿ ಕನ್ನಡ ಭಾಷೆಗಿದೆ. ಕನ್ನಡ ಎಂಬುದು ಸಕ್ಕರೆ ಬೊಂಬೆ ಯಿದ್ದಂತೆ, ಎಲ್ಲರೂ ಸುಲಭವಾಗಿ ಕಲಿಯಬಹು ದಾದ ಸರಳತೆ ನಮ್ಮ ಭಾಷೆಯಲ್ಲಿ ಅಡಗಿದೆ. ಹಾಗಾಗಿ ಪ್ರತಿಯೊಬ್ಬರು ಕನ್ನಡ ಸರ್ಕಾರಿ ಶಾಲೆಗಳಲ್ಲಿಯೇ ತಮ್ಮ ಮಕ್ಕಳನ್ನು ದಾಖಲಿಸುವು ದರಿಂದ ಕನ್ನಡ ಭಾಷೆಯನ್ನು ಮತ್ತಷ್ಟು ಬೆಳೆಸಲು ಸಾಧ್ಯವಿದೆ ಎಂದರು.

ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಆರ್. ಜಿ. ಹಳ್ಳಿ ನಾಗರಾಜ್ ಮಾತನಾಡಿ, ಕರ್ನಾಟಕ ಹಾಗೂ ಕನ್ನಡದ ಉಳಿವಿಗಾಗಿ ಹಲವು ವರ್ಷಗಳಿಂದ ಹೋರಾಟಗಳು ನಡೆಯುತ್ತಾ ಬಂದಿವೆ. ಕನ್ನಡದ ಅಭಿವೃದ್ಧಿಗೆ ಸಾಕಷ್ಟು ಪ್ರಭಾವಿತ ವ್ಯಕ್ತಿಗಳ ನಿರಂತರ ಪರಿಶ್ರಮವಿದೆ. ಇದನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವುದು ನಮ್ಮೆಲ್ಲರ ಆದ್ಯ ಕರ್ತವ್ಯ, ವಿದ್ಯಾರ್ಥಿಗಳು ಕನ್ನಡ ವಿಷಯಗಳ ಬಗ್ಗೆ ಹೆಚ್ಚಿನ ಅಧ್ಯಯನ ಹಾಗೂ ಸಂಶೋಧನೆಗಳನ್ನು ಕೈಗೊಳ್ಳುವ ಮೂಲಕ ಕನ್ನಡದ ವೈಭವವನ್ನು ಮುಂದುವರೆಸುವುದು ಅಗತ್ಯವಾಗಿದೆ ಎಂದು ತಿಳಿಸಿದರು

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಬಿ.ಡಿ. ಕುಂಬಾರ್ ಮಾತನಾಡಿ, ಕನ್ನಡ ಮತ್ತು ಕರ್ನಾಟಕದ ಉಳಿವಿಗೆ ಉತ್ತರ ಕರ್ನಾಟಕದ ಕೊಡುಗೆ  ಅಪಾರವಾಗಿದೆ. ಕನ್ನಡ ಅಭಿರುಚಿ ಮತ್ತು ಆಸಕ್ತಿ ಇಲ್ಲವಾದಲ್ಲಿ ಉತ್ತಮ ವಿದ್ಯಾರ್ಥಿ ಯಾಗಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಕನ್ನಡ ಸಾಹಿತ್ಯ ವನ್ನು ಓದುವ ಹವ್ಯಾಸ  ವಿದ್ಯಾರ್ಥಿಗಳಲ್ಲಿ ಕಡಿಮೆಯಾಗುತ್ತಿರುವುದು ವಿಪರ್ಯಾಸ. ಕರ್ನಾಟಕದ ಗಡಿಭಾಗದ ಕನ್ನಡಿಗರಿಗೆ ಸಾಕಷ್ಟು ಸಮಸ್ಯೆಗಳಿವೆ. ಅವುಗಳಿಗೆ ಸೂಕ್ತ ಪರಿಹಾರ ಜರುಗಿಸು ವುದು ಸರ್ಕಾರದ ಜವಾಬ್ದಾರಿ ಎಂದರು.

ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ಮಹಾಬಲೇಶ್ವರ ಯು. ಎಸ್, ಪರೀಕ್ಷಾಂಗ ಕುಲ ಸಚಿವ ಪ್ರೊ. ರಮೇಶ್ ಸಿ. ಕೆ, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ್ರ, ಕನ್ನಡ ಅಧ್ಯಯನ ವಿಭಾಗದ ಅಧ್ಯಕ್ಷ ಡಾ. ಜಯರಾಮಯ್ಯ ವಿ, ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

error: Content is protected !!