ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಇಂದು ಆರೋಗ್ಯ ತಪಾಸಣಾ ಶಿಬಿರ

ಜಿಲ್ಲಾ ವಕೀಲರ ಸಂಘ, ಜಿಲ್ಲಾ ನ್ಯಾಯಾಂಗ ಇಲಾಖೆ ಇವರ ಸಹಯೋಗದಲ್ಲಿ ಎನ್.ಹೆಚ್. ನಿಧಿ ಹೆಲ್ತ್‍ಕೇರ್ (ಬೆಂಗಳೂರು) ಇವರ ವತಿಯಿಂದ ಇಂದು ಬೆಳಿಗ್ಗೆ 10.30ಕ್ಕೆ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ನೆರವೇರಿಸಲಿದ್ದು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್‍ಕುಮಾರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜಪ್ಪ, ಹನುಮಂತಪ್ಪ, ಅಣ್ಣಯ್ಯನವರ, ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಆರ್.ಎನ್. ಪ್ರವೀಣ್‍ಕುಮಾರ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಎಸ್‍ಟಿಎಫ್‍ಸಿ1ರ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ, ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ಶಿವಪ್ಪ-ಗಂಗಪ್ಪ ಸಲಗರೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ.ಎಂ. ನಿವೇದಿತಾ ಆಗಮಿಸಲಿದ್ದಾರೆ.

error: Content is protected !!