ದಾವಣಗೆರೆ, ನ.11- ನಗರದ ಜಿ.ಎಂ. ವಿಶ್ವವಿದ್ಯಾಲಯದಲ್ಲಿ ನಾಳೆ ದಿನಾಂಕ 12 ರಂದು ಬೆಳಿಗ್ಗೆ 11 ಗಂಟೆಗೆ ನೂತನ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಡಾ. ಗಿರೀಶ್ ಬೋಳಕಟ್ಟೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಂಕುಸ್ಥಾಪನೆಗೆ ಚಾಲನೆ ನೀಡಲಿದ್ದಾರೆ.
ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯವನ್ನು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಉದ್ಘಾಟಿಸಲಿದ್ದಾರೆ. ನಂತರ ಜಿ.ಎಂ. ಹಾಲಮ್ಮ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಮುರುಗೇಶ್ ನಿರಾಣಿ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಕೆ.ಎಸ್.ನವೀನ್, ಹರಿಹರ ಶಾಸಕ ಬಿ.ಪಿ. ಹರೀಶ್, ಜಿಲ್ಲಾ ಬಿಜೆಪಿ ಮಹಿಳಾ ಮುಖಂಡರಾದ ಜಿ.ಎಸ್. ಗಾಯತ್ರಿ ಸಿದ್ದೇಶ್ವರ ಉಪಸ್ಥಿತರಿರುವರು.
ಟ್ರಸ್ಟಿಗಳಾದ ಜಿ.ಎಂ. ಪ್ರಸನ್ನಕುಮಾರ್, ಜಿ.ಎಂ. ಲಿಂಗರಾಜ್, ಜಿ.ಎಸ್. ಅನಿತ್ ಕುಮಾರ್, ಜಿ.ಪಿ. ಮಲ್ಲಿಕಾರ್ಜುನ್, ಶೀಲಾ ಪ್ರಸನ್ನಕುಮಾರ್, ವೀಣಾ ಲಿಂಗರಾಜ್, ಸವಿತಾ ಅನಿತ್ ಕುಮಾರ್, ಜಿ.ಎಲ್. ರಾಜೀವ್, ವಿವಿ ಕುಲಪತಿ ಡಾ.ಎಸ್.ಆರ್. ಶಂಕಪಾಲ್, ಸಹ ಕುಲಪತಿ ಡಾ.ಹೆಚ್.ಡಿ.ಮಹೇಶಪ್ಪ, ಕುಲಸಚಿವ ಡಾ.ಬಿ.ಎಸ್. ಸುನೀಲ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಡಾ. ತೇಜಸ್ವಿ ಕಟ್ಟಿಮನಿ, ಡಾ. ಜೆ. ಪ್ರವೀಣ್, ವಸಂತ ಕುಮಾರ್ ಉಪಸ್ಥಿತರಿದ್ದರು.