ದಾವಣಗೆರೆ, ನ.19- ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮದ್ಯ ಮಾರಾಟಗಾರರು ನಾಳೆ ದಿನಾಂಕ 20ರ ಬುಧವಾರ ರಾಜ್ಯಾದ್ಯಂತ ನಡೆಸಲುದ್ದೇಶಿಸಿದ್ದ ಮದ್ಯ ಮಾರಾಟ ಬಂದ್ ಕರೆಯನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಈಶ್ವರಸಿಂಗ್ ಕವಿತಾಳ್ ತಿಳಿಸಿದ್ದಾರೆ.
ಈ ಬಂದ್ ಕರೆ ಹಿನ್ನೆಲೆಯಲ್ಲಿ ಇಂದು ಮದ್ಯ ಮಾರಾಟಗಾರರ ಸಭೆ ನಡೆಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಡಿಕೆಗಳನ್ನು ಹಂತ -ಹಂತವಾಗಿ ಈಡೇರಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ತಾತ್ಕಾಲಿಕವಾಗಿ ಹಿಂತೆದುಕೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ.