ದಾವಣಗೆರೆ,ನ.19- ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2024-25 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಸಾಗುವಳಿ ಹೊಂದಿರುವ ಪ್ರತಿಯೊಬ್ಬ ರೈತ ಕುಟುಂಬವು ಈ ಯೋಜನೆಯಡಿ ಆರ್ಥಿಕ ನೆರವು ಪಡೆಯಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಈ ಯೋಜನೆಯಡಿ ಅರ್ಹ ಮತ್ತು ಅನರ್ಹ ಫಲಾನುಭವಿಗಳನ್ನು ಗುರುತಿಸಲು, ಆಧಾರ್ ಜೋಡಣೆ, ಇ-ಕೆವೈಸಿ ಬಾಕಿ, ಏಕ ಕುಟುಂಬ ಸದಸ್ಯರ ದೃಢೀಕರಣ, ಭೂಮಿ ದಾಖಲೆಗಳ ಮಾಹಿತಿ ಹಾಗೂ ಇತರೆ ದಾಖಲಾತಿಗಳನ್ನು ಭೌತಿಕವಾಗಿ ಪರಿಶೀಲಿಸಿ ಸರಿಪಡಿಸಿ ಯೋಜನೆಯ ನೆರವು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ, ಗ್ರಾಮ ಮಟ್ಟದಲ್ಲಿ ಗ್ರಾಮ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಬಹುದಾಗಿದೆ ಎಂದು
ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.