ಸ್ನಾತ ಕೋತ್ತರ ಪದವಿ ಹಾಗೂ ಪಿಹೆಚ್‍ಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ, ನ. 21 – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ  ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‍ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‍ಸೈಟ್ http://bcwd.karnataka.gov.in  ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 8050770004 ಸಹಾಯವಾಣಿ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಕೆ.ಹೆಚ್ ಗಾಯತ್ರಿ ತಿಳಿಸಿದ್ದಾರೆ.

error: Content is protected !!