ದಾವಣಗೆರೆ, ನ.27- ವಿಜಾಪುರ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳೆ ನೇತೃತ್ವದಲ್ಲಿ ಬೀದರ್ ಜಿಲ್ಲೆಯಲ್ಲಿ ನಡೆದಿರುವ ವಕ್ಫ್ ಭೂ ಕಬಳಿಕೆ ವಿರೋಧಿ ಜನಜಾಗೃತಿ ಹೋರಾಟದಲ್ಲಿ ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಹರಿಹರ ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ, ಅರವಿಂದ್ ಲಿಂಬಾವಳಿ, ಪ್ರಕಾಶ್ ಖಂಡ್ರೆ, ಬಂಡೆಪ್ಪ ಕಾಶಪ್ಪನವರ್, ಮುಖಂಡರಾದ ಎನ್.ಆರ್. ಸಂತೋಷ್ ಮತ್ತು ಇತರರು ಭಾಗವಹಿಸಿದ್ದರು.