ಕನ್ನಡ ಬಾರದ ನೌಕರರು, ಸಾರ್ವಜನಿಕರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ತರಬೇತಿ

ದಾವಣಗೆರೆ, ನ.25-   ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಗಳು ಒಂದಾಗಿ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿದೆ.

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ಹೆಸರು ನೋಂದಾಯಿ ಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿ ಇರುತ್ತದೆ.

ಈ ಯೋಜನೆಯನ್ನು ಸಾರ್ವಜನಿಕರಿಗೂ ವಿಸ್ತರಿಸಲಾಗಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, 18 ರಿಂದ 60 ವರ್ಷದೊಳಗಿನ ಆಸಕ್ತರು ಅರ್ಜಿ ಭರ್ತಿ ಮಾಡಿ ಜೊತೆಯಲ್ಲಿ 250 ರೂ. ಡಿಮ್ಯಾಂಡ್ ಡ್ರಾಫ್ಟನ್ನು ಕಳುಹಿಸಿಕೊಡಬೇಕು.  ತರಬೇತಿ ಮತ್ತು ಸಂಪರ್ಕ ಶಿಬಿರದ ಕೊನೆಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಅರ್ಜಿ ನಮೂನೆಯನ್ನು ಪ್ರಭಾರ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ  ಮಾನಸ ಗಂಗೋತ್ರಿ ಇವರಿಗೆ  ನ. 30ರ ಒಳಗಾಗಿ ಅರ್ಜಿ ಸಲ್ಲಿಸಬೇಕು.   ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821-234528 ಗೆ ಕರೆ ಮಾಡಿ ಸಂಪರ್ಕಿಸಬಹುದು. 

error: Content is protected !!