ನಾಮದೇವ ಸಿಂಪಿ ಸಮಾಜದಿಂದ 99ನೇ ಶ್ರೀ ಪಾಂಡುರಂಗ ವಿಠ್ಠಲ ರುಕ್ಮಿಣಿ ದಿಂಡಿ ಮಹೋತ್ಸವ ನಡೆಯುತ್ತಿದ್ದು, ಇಂದು ಸಭಾ ಕಾರ್ಯಕ್ರಮ ಏರ್ಪಾಡಾಗಿದೆ ಎಂದು ನಾಮದೇವಿ ಸಿಂಪಿ ಸಮಾಜ ದೈವ ಮಂಡಳಿಯ ಅಧ್ಯಕ್ಷ ವಿಠ್ಠಲ್ ಎಂ.ಎಸ್. ತಿಳಿಸಿದ್ದಾರೆ. ರಾಜನಹಳ್ಳಿ ಹನುಮಂತಪ್ಪ ಧರ್ಮಶಾಲೆಯಲ್ಲಿ ಬೆಳಿಗ್ಗೆ 9 ರಿಂದ ರಂಗೋಲಿ, ಸಾಂಸ್ಕೃತಿಕ, ವೇಷ ಭೂಷಣ ಸ್ಪರ್ಧೆ, ಭಕ್ತಿಗೀತೆ ಸ್ಪರ್ಧೆ, ನೃತ್ಯ ಕಾರ್ಯಕ್ರಮಗಳು ನಡೆಯಲಿವೆ.
12.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ದೂಡ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.