ದಾವಣಗೆರೆ, ನ.26- ಸಂವಿಧಾನವು ಅವಶ್ಯಕ ವಾದ ಧರ್ಮಗ್ರಂಥ ಮತ್ತು ಮೂಲ ಆಕರ ಗ್ರಂಥವಾಗಿದೆ. ಸಂವಿಧಾನ ನಾಗರಿಕನ ಮೂಲ ಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತದೆ. ಸಂವಿಧಾನವಿಲ್ಲದೇ ಮನುಷ್ಯ ಜೀವನವನ್ನು ಊಹಿಸಿಕೊಳ್ಳಲು ಕಷ್ಟವಾಗುತ್ತದೆ. ಇಂತಹ ಅತ್ಯಮೂಲ್ಯ ಮೌಲ್ಯಗಳನ್ನು ಒಳಗೊಂಡ ಸಂವಿಧಾನದ ಬಗ್ಗೆ ತಿಳಿದುಕೊಳ್ಳುವುದು ಹಾಗೂ ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಹೆಚ್. ಬಿಲ್ಲಪ್ಪ ಹೇಳಿದರು.
ನಗರದ ಆರ್.ಎಲ್. ಕಾನೂನು ಕಾಲೇಜಿ ನಲ್ಲಿ ಇಂದು ಆಯೋಜಿಸಿದ್ದ ಸಂವಿಧಾನ ದಿನಾಚ ರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿ ಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎಂ. ಹೆಗಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್‍ಕುಮಾರ್ ಅವರುಗಳು ಆಗಮಿಸಿದ್ದರು.
ಪ್ರೊ. ವಿದ್ಯಾಧರ ವೇದವರ್ಮ ಟಿ. ರವರು ಸಂವಿಧಾನದ ಪೀಠಿಕೆ ಬೋಧಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಸ್. ಯತೀಶ್ ವಹಿಸಿದ್ದರು.