ದಾವಣಗೆರೆ, ನ. 28- ನಗರದ ಜಿ.ಎಂ. ವಿಶ್ವವಿದ್ಯಾಲಯದ ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ವತಿಯಿಂದ ನಾಳೆ ದಿನಾಂಕ 29 ಮತ್ತು 30 ರಂದು ದಿ. ಜಿ. ಮಲ್ಲಿಕಾರ್ಜುನಪ್ಪ ಸ್ಮರಣಾರ್ಥವಾಗಿ ಜಿ. ಮಲ್ಲಿಕಾರ್ಜುನಪ್ಪ ಮೆಮೋರಿಯಲ್ ಕಪ್ ಶೀರ್ಷಿಕೆಯಡಿಯಲ್ಲಿ ರಾಜ್ಯಮಟ್ಟದ ಪುರುಷರು ಮತ್ತು ಮಹಿಳೆಯರ ಹೊನಲು ಬೆಳಕಿನ ಬಾಸ್ಕೆಟ್ ಬಾಲ್ ಪಂದ್ಯಾವಳಿಯನ್ನು ಜಿ.ಎಂ. ವಿವಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಶೋಧನಾ ವಿಭಾಗದ ಡೀನ್ ಡಾ.ಕೆ.ಎನ್. ಭರತ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಳೆ ದಿನಾಂಕ 30 ರಂದು ಬೆಳಿಗ್ಗೆ 10 ಗಂಟೆಗೆ ಜಿ.ಎಂ. ವಿವಿ ಕುಲಪತಿ ಡಾ.ಎಸ್.ಆರ್. ಶಂಕಪಾಲ್ ಪಂದ್ಯಾವಳಿಗೆ ಚಾಲನೆ ನೀಡುವರು. ಸಹ ಕುಲಪತಿ ಡಾ. ಹೆಚ್.ಡಿ. ಮಹೇಶಪ್ಪ, ಕುಲಸಚಿವ ಡಾ. ಬಿ.ಎಸ್. ಸುನಿಲ್ ಕುಮಾರ್, ಸಂಶೋಧನೆ ವಿಭಾಗದ ಡೀನ್ ಡಾ.ಕೆ.ಎನ್. ಭರತ್, ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಹೆಚ್.ಎಸ್. ಕಿರಣ್ ಕುಮಾರ್, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ನಿರ್ದೇಶಕರಾದ ಜಿ.ಬಿ. ಅಜ್ಜಯ್ಯ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ದಿನಾಂಕ 30 ರಂದು ಸಂಜೆ 7 ಗಂಟೆಗೆ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಲಿದೆ. ಜಿ.ಎಂ.ವಿವಿ ಕುಲಾಧಿಪತಿ ಜಿ.ಎಂ. ಲಿಂಗರಾಜ್ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ಮಾಡುವರು. ಕುಲಸಚಿವರಾದ ಡಾ. ಬಿ.ಎಸ್. ಸುನಿಲ್ ಕುಮಾರ್, ಸಂಶೋಧನಾ ವಿಭಾಗದ ಡೀನ್ ಡಾ.ಕೆ.ಎನ್. ಭರತ್, ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶನಾಲಯದ ನಿರ್ದೇಶಕರಾದ ಡಾ.ಹೆಚ್.ಎಸ್. ಕಿರಣ್ ಕುಮಾರ್, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ನಿರ್ದೇಶಕರಾದ ಜಿ.ಬಿ. ಅಜ್ಜಯ್ಯ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಡಾ. ಹೆಚ್.ಎಸ್. ಕಿರಣ ಕುಮಾರ್, ಜಿ.ಬಿ. ಅಜ್ಜಯ್ಯ, ವಸಂತಕುಮಾರ್ ಉಪಸ್ಥಿತರಿದ್ದರು.