ಡಾ.ಎಚ್.ಪಿ.ಅನಂತನಾಗ್ ಅಭಿಮತ
ಹರಿಹರ, ನ.29- ದೇಶದಲ್ಲಿನ ಪ್ರತಿಯೊಬ್ಬರು ಸಂವಿಧಾನವನ್ನು ಸಂಪೂರ್ಣವಾಗಿ ಅರಿಯಬೇಕು ಎಂದು ಪ್ರಾಧ್ಯಾಪಕ ಡಾ.ಎಚ್.ಪಿ. ಅನಂತನಾಗ್ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ, ಮಾನವ ಹಕ್ಕುಗಳ ವೇದಿಕೆ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಬುಧವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಿ.ಆರ್. ಅಂಬೇಡ್ಕರ್ ಅವರು ದೇಶ ಕಂಡ ಶ್ರೇಷ್ಠ ವ್ಯಕ್ತಿಗಳಾಗಿದ್ದು, ವಿದ್ಯಾರ್ಥಿಗಳು ಅವರು ಬೆಳೆದು ಬಂದ ಹಾದಿಯನ್ನು ತಿಳಿಯುವ ಜತೆಗೆ ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಡಾ.ಹೆಚ್. ವಿರೂಪಾಕ್ಷಪ್ಪ ಮಾತನಾಡಿ, ಸಂವಿಧಾನದ ಮಹತ್ವವನ್ನು ನಾವು ತಿಳಿಯಬೇಕು ಮತ್ತು ಸಮಾಜದಲ್ಲಿನ ಎಲ್ಲರಿಗೂ ತಿಳಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಡಾ. ಮಮತಾ ಸಾವಕಾರ ಅವರು ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಿದರು. ಕೆ.ಆರ್. ಚೌರಿ ಪ್ರಾಸ್ತಾವಿಕ ಮಾತನಾಡಿದರು. ಹೆಚ್.ಕೆ ಗುರುರಾಜ್ ಪ್ರಾರ್ಥಿಸಿದರು. ಎಂ.ಎನ್. ಮಂಜುನಾಥ್ ಸ್ವಾಗತಿಸಿದರು. ಎಂ. ವೆಂಕಟೇಶ್ ವಂದಿಸಿದರು. ಟಿ. ಹನುಮಂತ ನಿರೂಪಿಸಿದರು.