ಹರಿಹರದಲ್ಲಿ ಇಂದು ರಾಜ್ಯೋತ್ಸವ

ಹರಿಹರ, ನ. 29 – ನಗರದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ದ ವತಿಯಿಂದ ನಾಳೆ ದಿನಾಂಕ 30 ರ ಶನಿವಾರ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ಆಟೋ ಮೆರವಣಿಗೆ, ಸಾಧಕರಿಗೆ ಸನ್ಮಾನ, ಅನ್ನ ಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆಯ  ತಾಲ್ಲೂಕು ಅಧ್ಯಕ್ಷ ರಮೇಶ್ ಮಾನೆ ಮತ್ತು ನಗರ ಘಟಕದ ಅಧ್ಯಕ್ಷ ಪ್ರೀತಮ್ ಬಾಬು ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ವೃತ್ತದ ಪಕ್ಕೀರಸ್ವಾಮಿ ಮಠದ ಮುಂಭಾಗದಿಂದ ಬೃಹತ್ ಆಟೋ ಮೆರವಣಿಗೆ ಮೂಲಕ ಭುವನೇಶ್ವರಿ ಭಾವ ಚಿತ್ರದ ಮೆರವಣಿಗೆ ಮಾಡಲಾಗುತ್ತದೆ. ನಂತರ 11 ಗಂಟೆಗೆ ರಾಣಿ ಚೆನ್ನಮ್ಮ ವೃತ್ತದಲ್ಲಿ ವೇದಿಕೆ ಸಮಾರಂಭ ನಡೆಯಲಿದೆ. 

ಉದ್ಘಾಟನೆಯನ್ನು ಶಾಸಕ ಬಿ.ಪಿ. ಹರೀಶ್ ಮಾಡಲಿದ್ದಾರೆ. ಆಶಯ ನುಡಿಯನ್ನು ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಮಾತನಾಡಲಿದ್ದು, ಅಧ್ಯಕ್ಷತೆಯನ್ನು ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ರಮೇಶ್ ಮಾನೆ ವಹಿಸಲಿದ್ದಾರೆ. ಸಾಧಕರಿಗೆ ಸನ್ಮಾನ ಮಾಜಿ ಶಾಸಕ ಎಸ್. ರಾಮಪ್ಪ ಹಾಗೂ ಪ್ರಾಸ್ತಾವಿಕ ನುಡಿಯನ್ನು ರಕ್ಷಣಾ ವೇದಿಕೆಯ ನಗರ ಘಟಕದ ಅಧ್ಯಕ್ಷ ಪ್ರೀತಮ್ ಬಾಬು ಮಾತನಾಡಲಿದ್ದಾರೆ.

 ವಿಶೇಷ ಆಹ್ವಾನಿತರಾಗಿ ಕಾಂಗ್ರೆಸ್ ಪಕ್ಷದ ಮುಖಂಡ ನಂದಿಗಾವಿ ಶ್ರೀನಿವಾಸ್, ತಪೋವನ ಛೇರ್ಮನ್ ಶಶಿಕುಮಾರ್, ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್, ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ನಾಗರಾಜ್ ಜಮ್ನಳ್ಳಿ, ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ, ಉಪಾಧ್ಯಕ್ಷ ಗುತ್ತೂರು ಜಂಬಣ್ಣ, ತಹಶೀಲ್ದಾರ್ ಗುರುಬಸವರಾಜ್, ಇನ್‌ಸೈಟ್‌ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್, ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಾಂಭವಿ ನಾಗರಾಜ್  ಭಾಗವಹಿಸಲಿದ್ದಾರೆ. 

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಗೌರವ ಅಧ್ಯಕ್ಷ ಎನ್.ಎಂ. ಸಿದ್ದಪ್ಪ, ಉಪಾಧ್ಯಕ್ಷ ಅಕ್ಬರ್, ಪ್ರಧಾನ ಕಾರ್ಯದರ್ಶಿ ರುದ್ರೇಶ್ ಇತರರು ಹಾಜರಿದ್ದರು.

error: Content is protected !!