ಸಿಂಗ್ರಿಹಳ್ಳಿಯಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಸಿಂಗ್ರಿಹಳ್ಳಿಯಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಹರಪನಹಳ್ಳಿ, ಡಿ.4- ತಾಲ್ಲೂಕಿನ ಸಿಂಗ್ರಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್‌.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳ 60 ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಸಮವಸ್ತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌.ಡಿ.ಎಂ.ಸಿ. ಅಧ್ಯಕ್ಷ ಸಿ.ಹಾಲೇಶ್‌, ಉಪಾಧ್ಯಕ್ಷ, ಸರ್ವ ಸದಸ್ಯರು,  ನಾಮ ನಿರ್ದೇಶಕರು, ಮುಖ್ಯೋಪಾಧ್ಯಾಯ ಕೃಷ್ಣಮೂರ್ತಿ, ಹಿರಿಯ ಶಿಕ್ಷಕ ಸಿ. ನೀಲಪ್ಪ, ಶಿಕ್ಷಕರು ಮತ್ತು ಶಿಕ್ಷಕಿಯರು, ಅತಿಥಿ ಶಿಕ್ಷಕಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

error: Content is protected !!