ರಾಜ್ಯದ ರೈತರ ಬಡ ಜನರ ಮತ್ತು ಮಠ, ಮಂದಿರಗಳ ಜಮೀನುಗಳನ್ನು ಅಕ್ರಮವಾಗಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸಲು ಹೊರಟಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಜನಾಂದೋಲನ ಕಾರ್ಯಕ್ರಮವು ಇಂದು ಬೆಳಿಗ್ಗೆ 9ಕ್ಕೆ ಭಾನುವಳ್ಳಿ ಗ್ರಾಮದ ನೀರಾವರಿ ಇಲಾಖೆಯ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ತು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಸಿ. ಅಶ್ವತ್ಥ್ ನಾರಾಯಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ್ ನಾಗಪ್ಪ, ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ, ಬಿಜೆಪಿ ಮುಖಂಡ ಚಂದ್ರಶೇಖರ ಪೂಜಾರ್ ಹಾಗೂ ಇತರರು ಆಗಮಿಸಲಿದ್ದಾರೆ.