ಮಕ್ಕಳನ್ನು ದುಡಿಸಿಕೊಂಡರೆ ಶಿಕ್ಷಾರ್ಹ ಅಪರಾಧ

ಮಕ್ಕಳನ್ನು ದುಡಿಸಿಕೊಂಡರೆ ಶಿಕ್ಷಾರ್ಹ ಅಪರಾಧ

ದಾವಣಗೆರೆ, ಡಿ.3- ಹದಿನೆಂಟು ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಹೋಟೆಲ್, ಗ್ಯಾರೇಜ್, ವಾಣಿಜ್ಯ ಸಂಸ್ಥೆಗಳು, ಮಂಡಕ್ಕಿ ಭಟ್ಟಿ, ಇಟ್ಟಿಗೆ ಭಟ್ಟಿ, ಕಲ್ಲಿನ ಕೋರೆಗಳಲ್ಲಿ ಹಾಗೂ ಬಾರ್ ಮತ್ತು ರೆಸ್ಟೋರೆಂಟ್ ಸೇರಿದಂತೆ ಇತರೆ ಅಂಗಡಿಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಂಡಲ್ಲಿ ಕಾನೂನು ರೀತಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಕಾನೂನು ಉಲ್ಲಂಘಿಸಿ 18 ವರ್ಷದೊಳಗಿನ ಕಿಶೋರರನ್ನು ಕೆಲಸಕ್ಕೆ ಸೇರಿಸಿಕೊಂಡಲ್ಲಿ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 20 ಸಾವಿರ ರೂ.ಗಳಿಂದ 50 ಸಾವಿರ ರೂ.ಗಳ  ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುವುದು.

ಪುನರಾವರ್ತಿತ ಅಪರಾಧಕ್ಕೆ 1ವರ್ಷದಿಂದ 3ವರ್ಷಗಳವರೆಗೆ ಜೈಲು ಶಿಕ್ಷೆ, ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಸಹ ಲಘು ಶಿಕ್ಷಾ ಅವಕಾಶವಿದ್ದು, ಪುನರಾವರ್ತಿತ ಅಪರಾಧಕ್ಕೆ  10 ಸಾವಿರ ರೂ.ಗಳ ದಂಡ ವಿಧಿಸಲಾಗುವುದು.

14 ಹಾಗೂ 18 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಪ್ರಕ್ರಿಯೆ ಅಥವಾ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವುದು ಕಂಡು ಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಅಥವಾ 08192-230094, 237332 ತಿಳಿಸುವಂತೆ ಮನವಿ ಮಾಡಿದ್ದಾರೆ.

error: Content is protected !!