ಕರ್ನಾಟಕ ಲೋಕಸೇವಾ ಆಯೋಗದಿಂದ ನಾಳೆ ಪಿ.ಡಿ.ಓ ಪರೀಕ್ಷೆ

ಕರ್ನಾಟಕ ಲೋಕಸೇವಾ ಆಯೋಗದಿಂದ ನಾಳೆ ಪಿ.ಡಿ.ಓ ಪರೀಕ್ಷೆ

ದಾವಣಗೆರೆ, ಡಿ. 5 – ಕರ್ನಾಟಕ ಲೋಕಸೇವಾ ಆಯೋಗದಿಂದ ನಾಡಿದ್ದು ದಿನಾಂಕ 7 ಮತ್ತು 8 ರಂದು ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಾದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ 150 ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪರೀಕ್ಷೆ ವೇಳೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರಕ್ಕೆ ಅವಕಾಶ ನೀಡದೇ ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರಸ್ವಾಮಿ ಸೂಚಿ ಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿನ್ನೆ ಜರುಗಿದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ದಿನಾಂಕ 7 ರ ಶನಿವಾರ ಜಿಲ್ಲೆಯ 22 ಪರೀಕ್ಷಾ ಕೇಂದ್ರ ಗಳಲ್ಲಿ 9198 ಅಭ್ಯರ್ಥಿಗಳು ಮತ್ತು ದಿನಾಂಕ 8 ರ ಭಾನು ವಾರ 27 ಪರೀಕ್ಷಾ ಕೇಂದ್ರ ಗಳಲ್ಲಿ 11,749 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀ ಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯು ಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣ ಗಳನ್ನು ಪರೀಕ್ಷಾ ಕೇಂ ದ್ರದೊಳಗೆ ಕೊಂಡೊಯ್ಯುವು ದನ್ನು ಕಡ್ಡಾಯವಾಗಿ ನಿಷೇಧಿಸಿದೆ. ದಿನಾಂಕ 7 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ, ಡಿ.8 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಪತ್ರಿಕೆ-1 ಸಾಮಾನ್ಯ ಜ್ಞಾನ, ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಪತ್ರಿಕೆ-2, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಕಂಪ್ಯೂಟರ್ ಜ್ಞಾನ ವಿಷಯದ ಕುರಿತು ಪರೀಕ್ಷೆ ಇರುತ್ತದೆ. ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ  ಎಂದರು.

ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ  ಜಿ. ಕೊಟ್ರೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

error: Content is protected !!