ಹರಪನಹಳ್ಳಿಯಲ್ಲಿ ಇಂದು ಅಂತರ್ ಕಾಲೇಜು ಕುಸ್ತಿ ಪಂದ್ಯಾವಳಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವವಿದ್ಯಾಲಯ ಮಟ್ಟದ ಪುರುಷ ಹಾಗೂ ಮಹಿಳೆಯರ ಅಂತರ್ ಕಾಲೇಜು ಕುಸ್ತಿ ಪಂದ್ಯಾವಳಿಯು ಇಂದು ಮತ್ತು ನಾಳೆ ಜರುಗಲಿವೆ ಎಂದು  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಸತೀಶ   ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಹೆಚ್. ಕೊಟ್ರೇಶ ತಿಳಿಸಿದ್ದಾರೆ.

ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರು  ಇಂದು ಬೆಳಿಗ್ಗೆ 11ಕ್ಕೆ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಕೆ. ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಬಳ್ಳಾರಿ ವಿ.ವಿ. ಆಡಳಿತ ವಿಭಾಗದ ಕುಲಸಚಿವ ಎಸ್.ಎನ್. ರುದ್ರೇಶ್, ಕಲಬುರ್ಗಿ ಕೇಂದ್ರಿಯ ವಿವಿ ಸಂದರ್ಶಕ ಪ್ರಾಧ್ಯಾಪಕ ಡಾ.ಎಂ.ಎಸ್ ಪಾಸವಾಡಿ,  ವಿ.ಎಸ್. ಕೆಯುಬಿಯ ಇಂಗ್ಲಿಷ್ ವಿಭಾಗದ ಮುಖ್ಯಸ್ಥ  ಡಾ.ಶಾಂತನಾಯ್ಕ, ಕೊಪ್ಪಳದ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಆರ್ ಹವಳದ್, ಕೂಡ್ಲಿಗಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಷಣ್ಮುಖನಗೌಡ ಎಸ್., ಹೂವಿನ ಹಡಗಲಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶು ಪಾಲ ಡಾ. ವಿಜಯಕುಮಾರ, ಕೊಟ್ಟೂರಿನ ಕೊಟ್ಟೂರೇಶ್ವರ ಮಹಾವಿದ್ಯಾಲ ಯದ  ಡಾ.ರವಿಕುಮಾರ, ನ್ಯಾಯವಾದಿ ಕೆ.ಎಂ. ಚಂದ್ರಮೌಳಿ, ಕಸಾಪ ತಾಲ್ಲೂಕು ಅಧ್ಯಕ್ಷ ಕೆ.ಉಚ್ಚೆಂಗೆಪ್ಪ, ನ್ಯಾಯವಾದಿ ಡಾ.ಎಂ.ಸುರೇಶ ಭಾಗವಹಿಸುವರು.

error: Content is protected !!