ದಾವಣಗೆರೆ, ಡಿ.8- ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಾದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ 150 ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಭಾನುವಾರವೂ ನಗರದಲ್ಲಿ ಸುಗಮವಾಗಿ ನಡೆಯಿತು.
ಇಂದು 27 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ 12029 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಮೊದಲ ಪತ್ರಿಕೆಗೆ 6267 ಹಾಜರಾಗಿ 5762 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ ನಡೆದ ಎರಡನೇ ಪತ್ರಿಕೆಗೆ 6234ರ ಪೈಕಿ 5795 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ಬೆಳಿಗ್ಗೆ 10 ರಿಂದ 11.30 ರವರೆಗೆ ಪತ್ರಿಕೆ-1 ಸಾಮಾನ್ಯ ಜ್ಞಾನ, ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಪತ್ರಿಕೆ-2, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಕಂಪ್ಯೂಟರ್ ಜ್ಞಾನ ವಿಷಯದ ಕುರಿತು ಪರೀಕ್ಷೆ ನಡೆಯಿತು.