ದಾವಣಗೆರೆ, ಡಿ.9- ಫಲಾನುಭವಿಗಳು ಸರ್ಕಾರ ದಿಂದ ಪಡೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
ನಗರದ ಗೃಹ ಕಚೇರಿಯ ಆವರಣದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಹ 15 ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅರಿವು ಮೂಡಿಸಿದರು.
2012 ಹಾಗೂ 13 ನೇ ಸಾಲಿನಿಂದ ವಿಕಲಚೇತನರಿಗೆ ತ್ರಿಚಕ್ರ ವಿತರಣೆಯ ಯೋಜನೆಯನ್ನು ರೂಪಿಸಲಾಗಿದೆ. ನಮ್ಮ ಜಿಲ್ಲೆಯಲ್ಲಿ ಇದುವರೆಗೂ 5436 ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ನೀಡಲಾಗಿದೆ. 2023-24 ನೇ ಸಾಲಿನಲ್ಲಿ ಜಿಲ್ಲೆಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ರೂ.4 ಕೋಟಿ 25 ಲಕ್ಷದ 10 ಸಾವಿರ ಅನುದಾನ ಬಂದಿದ್ದು 2024-25 ನೇ ಸಾಲಿನಲ್ಲಿ 286 ಅರ್ಜಿಗಳ ಪೈಕಿ 86 ತ್ರಿಚಕ್ರ ವಾಹನಗಳನ್ನು ವಿತರಿಸಿದ್ದು, ಇನ್ನುಳಿದವುಗಳನ್ನು ಹಂತ ಹಂತವಾಗಿ ವಿತರಣೆ ಆಗಲಿವೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರ ಇಲಾಖೆಯ ಉಪ ನಿರ್ದೇಶಕ ಡಾ.ಕೆ.ಕೆ ಪ್ರಕಾಶ್, ಕಾಂಗ್ರೆಸ್ ಪಕ್ಷದ ಮುಖಂಡರುಗಳು ಇತರರು ಉಪಸ್ಥಿತರಿದ್ದರು.