ಕೃಷ್ಣ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

ಕೃಷ್ಣ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

ಶ್ರೀ ರಂಭಾಪುರಿ ಪೀಠ (ಬಾಳೆಹೊನ್ನೂರು) ಡಿ. 10 – ರಾಜ್ಯದ ಮುಖ್ಯ ಮಂತ್ರಿಯಾಗಿ, ಕೇಂದ್ರದ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ರಾಜ್ಯ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ ಪದ್ಮಭೂಷಣ ಎಸ್.ಎಂ. ಕೃಷ್ಣ ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೃಷ್ಣ ಅವರು ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿರುವುದನ್ನು ಮರೆಯಲಾಗದು. ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಿದ ಗುರು-ವಿರಕ್ತರ ಸಮಾವೇಶಕ್ಕೆ ಆಗಮಿಸಿ ಸಮಾರಂಭ ಉದ್ಘಾಟಿಸಿದ್ದು ತಮ್ಮ ಮನದಲ್ಲಿ ಹಸಿರಾಗಿದೆ. ನಂತರದ ದಿನಗಳಲ್ಲಿಯೂ ಸಹ ಅವರು ಶ್ರೀ ಪೀಠಕ್ಕೆ ಆಗಮಿಸಿ ಜಗದ್ಗುರುಗಳ ಆಶೀರ್ವಾದ ಪಡೆದು ಹೋಗಿದ್ದಾರೆ. ಹಲವಾರು ಸಮಾರಂಭಗಳಲ್ಲಿ ಅವರು ಭಾಗವಹಿಸಿದ್ದು ತಮ್ಮ ಮನದಲ್ಲಿ ಹಸಿರಾಗಿದೆ. ಅವರು ಮುತ್ಸದ್ದಿ ರಾಜಕಾರಣಿಯಾಗಿದ್ದರು. ಸರಳತೆ ಮತ್ತು ಸೌಜನ್ಯತೆಯ ನಡವಳಿಕೆ ಹೊಂದಿದ್ದ ಅವರ ಅಗಲಿಕೆ ತಮಗೆ ನೋವನ್ನುಂಟು ಮಾಡಿದೆ ಎಂದು ಜಗದ್ಗುರುಗಳು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

error: Content is protected !!