ಲಾಠಿ ಜಾರ್ಜ್‌ಗೆ ಪಂಚಮಸಾಲಿ ಶಾಸಕನ ಕುಮ್ಮಕ್ಕು: ಆರೋಪ

ಲಾಠಿ ಜಾರ್ಜ್‌ಗೆ ಪಂಚಮಸಾಲಿ ಶಾಸಕನ ಕುಮ್ಮಕ್ಕು: ಆರೋಪ

ಹಿರೇಬಾಗೇವಾಡಿ, ಡಿ.12- ಪಂಚಮ ಸಾಲಿ ಸಮಾಜ ದವರೇ ಆದ ಶಾಸಕ ರೊಬ್ಬರು ಕುಮ್ಮಕ್ಕು ನೀಡಿ ಲಾಠಿ ಚಾರ್ಜ್‌ ಮಾಡಿಸಿ ದ್ದಾರೆ. ಇದಕ್ಕೆ ಸುವರ್ಣ ವಿಧಾನ ಸೌಧದ ಒಳಗಿನ ಸಿಟಿಟಿವಿ ಕ್ಯಾಮೆರಾಗಳೇ ಸಾಕ್ಷಿ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಾಧಿಪತಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಗಂಭೀರ ಆರೋಪ ಮಾಡಿದರು.

ಲಾಠಿ ಚಾರ್ಜ್‌ ಖಂಡಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಗುರುವಾರ ಕೂಡ ಬಂದ್‌ ಮಾಡಿದ ವೇಳೆ ಅವರು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಬಸವಣ್ಣನ ಕಾಲದಲ್ಲಿ ಕೊಂಡಿ ಮಂಚಣ್ಣನಂಥವರು ಇದ್ದರು. ರಾಣಿ ಚನ್ನಮ್ಮನ ಕಾಲದಲ್ಲಿ ಮಲ್ಲಪ್ಪಶೆಟ್ಟಿ ಅಂಥವರು ಇದ್ದರು. ನಮ್ಮ ಕಾಲದಲ್ಲೂ ನಮ್ಮದೇ ಸಮಾಜದಲ್ಲಿ ಅಂಥವರು ಇದ್ದಾರೆ ಎಂದರು.

ನಮ್ಮ ಸಮಾಜದ ಶಾಸಕರೊಬ್ಬರು ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಅವರು ಯಾರೆಂದು ನಾನು ಹೆಸರು ಹೇಳುವುದಿಲ್ಲ. ಅಂಥವರ ಹೆಸರು ಹೇಳಿ ನನ್ನ ನಾಲಿಗೆಯನ್ನು ಹೊಲಸು ಮಾಡಿಕೊಳ್ಳುವುದಿಲ್ಲ ಎಂದೂ ಕಿಡಿ ಕಾರಿದರು.

error: Content is protected !!