ದಾವಣಗೆರೆ, ಡಿ.12-ನಗರದ ಧ.ರಾ.ಮ. ವಿಜ್ಞಾನ ಕಾಲೇಜಿನಲ್ಲಿ ಇದೇ ದಿನಾಂಕ 15 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನವನ್ನು ಆಯೋಜಿಸಲಾಗಿದೆ.
ಧ.ರಾ.ಮ. ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಹಿರಿಯ ವಿದ್ಯಾರ್ಥಿಗಳು ಈ ಸ್ನೇಹ ಸಮ್ಮೇಳನದಲ್ಲಿ ಭಾಗವಹಿಸಲು ಕೋರಲಾಗಿದೆ. ಭಾಗವಹಿಸಲು ಇಚ್ಚಿಸುವವರು ಮೊ.ಸಂಖ್ಯೆ 94497 73064, 96113 90375, 99802 88121 ಸಂಪರ್ಕಿಸಲು ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ಹಾಗೂ ಪ್ರಾಂಶುಪಾಲರು ತಿಳಿಸಿದ್ದಾರೆ.