ಇಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಮಹಿಳಾ ಘಟಕದ ವಾರ್ಷಿಕೋತ್ಸವ

ಜಾಗತಿಕ ಲಿಂಗಾಯತ ಮಹಾಸಭಾ, ದಾವಣಗೆರೆ ಜಿಲ್ಲಾ ಮಹಿಳಾ ಘಟಕದ ವಾರ್ಷಿಕೋತ್ಸವ, ಅರಿವಿನ ಮಹಾಮನೆ ಉದ್ಘಾಟನೆ, ಶರಣರ ಜಯಂತಿ ಕಾರ್ಯಕ್ರಮವನ್ನು  ಇಂದು ಬೆಳಿಗ್ಗೆ 11.30ಕ್ಕೆ ಜೆ.ಹೆಚ್. ಪಟೇಲ್ ಬಡಾವಣೆಯ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 11.15ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು ಡಾ. ಗುರುಬಸವ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಎ.ಹೆಚ್. ಹುಚ್ಚಪ್ಪ ಮಾಸ್ತರ್ ಕಾರ್ಯಕ್ರಮ ಉದ್ಘಾಟಿಸುವರು.

ಕುಸುಮ ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಡಾ. ಕೊಟ್ರೇಶ್ ಬಿದರಿ ಆಶಯ ನುಡಿಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗ ಳಾಗಿ ಜಿ. ಕುಲಕರ್ಣಿ  ಉಪಸ್ಥಿತರಿದ್ದು, ವಚನದಲ್ಲಿ ಆಹಾರ ಪ್ರಜ್ಞೆ ವಿಷಯ ಕುರಿತು ಮಾತನಾಡಲಿದ್ದಾರೆ. ಮಂದಾಕಿನಿ ಸ್ವಾಮಿ, ರುದ್ರಮುನಿ ಆವರಗೆರೆ, ಕೆ.ಬಿ. ಪರಮೇಶ್ವರಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

error: Content is protected !!