ಎಸ್.ಬಿ.ಸಿ. ಮಹಿಳಾ ಕಾಲೇಜು ಹಾಗೂ ಅಥಣಿ ಸ್ನಾತಕೋತ್ತರ ಕೇಂದ್ರದಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘ, ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್. ಘಟಕ ಹಾಗೂ ರೆಡ್ ಕ್ರಾಸ್ ಘಟಕಗಳ ಉದ್ಘಾಟನಾ ಸಮಾರಂಭವನ್ನು ಇಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಎಸ್.ಬಿ.ಸಿ. ಕಾಲೇಜಿನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಡಾ. ಅಥಣಿ ವೀರಣ್ಣ ಅಧ್ಯಕ್ಷತೆ ವಹಿಸುವರು. ಎಸ್ಪಿ ಉಮಾಪ್ರಶಾಂತ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ದುಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಬಿ.ಸಿ. ಉಮಾಪತಿ, ಎನ್.ಎ. ಮುರುಗೇಶ್, ಅಥಣಿ ಪ್ರಶಾಂತ್ ಉಪಸ್ಥಿತರಿರುವರು.
ಪ್ರಾಂಶುಪಾಲ ಡಾ. ಕೆ. ಷಣ್ಮುಖ ಪ್ರಸ್ತಾವಿಕ ನುಡಿಗಳನ್ನಾಡಲಿದ್ದಾರೆ.