ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಾಲಾ-ಕಾಲೇಜು ಅಂಗಳದಲ್ಲಿ ಸಾಹಿತ್ಯೋ ತ್ಸವದ ಅಂಗವಾಗಿ ಸ್ವಾಮಿ ವಿವೇಕಾನಂದ ಬಡಾವಣೆಯ ಚಿಕ್ಕನಹಳ್ಳಿ ದೊಡ್ಡಪ್ಪ ಪ್ರೌಢಶಾಲೆ ಆವರಣದಲ್ಲಿ ಇಂದು ಮಧ್ಯಾಹ್ನ 2 ಕ್ಕೆ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕನಹಳ್ಳಿ ದೊಡ್ಡಪ್ಪ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಕೆ. ಶಿವಮೂರ್ತಿ ವಹಿಸಲಿದ್ದಾರೆ.
ನಾಗರಸನಹಳ್ಳಿ ಸರ್ಕಾರಿ ಪ್ರೌಢಶಾಲೆ ಕನ್ನಡ ಶಿಕ್ಷಕ ರವಿ ಹೆಚ್.ಎಸ್. ಇವರು `ಕನ್ನಡ ಭಾಷೆಯ ಅಸ್ಮಿತೆ’ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ತಾಲ್ಲೂಕು ಕ.ಸಾ.ಪ. ದಾವಣಗೆರೆ ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ, ಗೌರವ ಕಾರ್ಯದರ್ಶಿ ದಿಳ್ಯೆಪ್ಪ, ನಿರ್ದೇಶಕರಾದ ಶ್ರೀಮತಿ ಕೆ.ಜಿ. ಸೌಭಾಗ್ಯ ಮತ್ತು ರಟ್ಟಿಹಳ್ಳಿ ಶಿವಕುಮಾರ್ ಆಗಮಿಸುವರು.
ದಾವಣಗೆರೆ ತಾ|| ಕಸಾಪ ನಿರ್ದೇಶಕ ಷಡಕ್ಷರಪ್ಪ ಎಂ. ಬೇತೂರು ಪ್ರಾಸ್ತಾವಿಕ ನುಡಿಗಳನ್ನಾಡುವರು.