ದಾವಣಗೆರೆ, ಡಿ. 15 – ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಗಿರಿಜನ ಯೋಜನೆಯಡಿಯಲ್ಲಿ 2023ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಇದೇ ದಿನಾಂಕ 20 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ : 08192-237480ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ರೇಣುಕಾದೇವಿ ತಿಳಿಸಿದ್ದಾರೆ.