ಹರಪನಹಳ್ಳಿ, ಡಿ. 18 – ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಇದೇ ದಿನಾಂಕ 23ನೇ ಸೋಮವಾರ ಮಧ್ಯಾಹ್ನ 3.30ಕ್ಕೆ 2025-26ನೇ ಸಾಲಿನ ಪುರಸಭೆಯ ಆಯವ್ಯಯ ಅಂದಾಜು ಪತ್ರಿಕೆಯನ್ನು ತಯಾರಿಸುವ ಪ್ರಯುಕ್ತ ಸಾರ್ವಜನಿಕರಿಂದ, ಸಂಘ-ಸಂಸ್ಥೆಗಳಿಂದ ಹಾಗೂ ಹಿರಿಯ ನಾಗರಿಕರಿಂದ ಸಲಹೆ, ಸೂಚನೆಗಳನ್ನು ಪಡೆಯಲು ಪೂರ್ವ ಭಾವಿ ಸಭೆಯನ್ನು ಆಯೋಜಿಸಲಾಗಿದೆ. ಪಟ್ಟಣದ ಸಾರ್ವಜನಿಕರು ಸದರಿ ಪೂರ್ವಭಾವಿ ಸಭೆಯಲ್ಲಿ ಪಾಲ್ಗೋಂಡು ತಮ್ಮ ಸೂಕ್ತ ಸಲಹೆ ಮತ್ತು ಅಭಿಪ್ರಾಯಗಳನ್ನು ಸಲ್ಲಿಸುವಂತೆ ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್ ತಿಳಿಸಿದ್ದಾರೆ.
December 22, 2024