ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಗರದ ಹೈಸ್ಕೂಲ್ ಮೈದಾನದಲ್ಲಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗದಲ್ಲಿ ಇಂದು ಬೆಳಗ್ಗೆ 11ಕ್ಕೆ `ಜಿಲ್ಲಾ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ’ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ.
ಡಯಟ್ ಪ್ರಾಚಾರ್ಯೆ ಎಸ್. ಗೀತಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಜಿ. ಕೊಟ್ರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರಭಾರಿ ಪರಿವೀಕ್ಷಕ ಬತುಲ್ ಅಖ್ತರ್, ಎಲ್. ರವಿ, ತ್ರಿವೇಣಿ, ಎಲ್.ಜಯಪ್ಪ, ಡಾ. ಪುಷ್ಪಲತಾ, ಹೆಚ್.ಆರ್. ಶೇರ್ ಅಲಿ, ಡಿ. ದುರುಗಪ್ಪ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.