ಸ್ವಾಭಿಮಾನಿ ಬಳಗವು ಹೊನ್ನಾಳಿ – ನ್ಯಾಮತಿ ಅವಳಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಶಿಕ್ಷಣ ಅದಾಲತ್ – ನಮ್ಮ ನಡೆ ಸರ್ಕಾರಿ ಶಾಲೆಗಳ ಕಡೆಗೆ ಅಭಿಯಾನವನ್ನು ಇಂದು ಹಮ್ಮಿಕೊಂಡಿದೆ.
ಅಭಿಯಾನವು ಹೊನ್ನಾಳಿ – ನ್ಯಾಮತಿ ತಾಲ್ಲೂಕಿನ ಸೂರಗೊಂಡನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿದೆ. ಬಳಿಕ ಹಳೆ ಜೋಗ ಮತ್ತು ಹೊಸ ಜೋಗ, ಚಿನ್ನಿಕಟ್ಟೆ, ಮಾದಾಪುರ, ಕೊಡತಾಳ, ಸವಳಂಗ, ಸೋಗಿಲು, ಚಟ್ನಹಳ್ಳಿ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ, ಹಂತ-ಹಂತವಾಗಿ ಅವಳಿ ತಾಲ್ಲೂಕುಗಳ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಅಭಿಯಾನ ನಡೆಯಲಿದೆ ಎಂದು ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರುಗಳು ಹಾಗೂ ಗ್ರಾಮಸ್ಥರು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ನಮ್ಮ ಜೊತೆಯಲ್ಲಿದ್ದು ಸಲಹೆ, ಸಹಕಾರ ನೀಡಬೇಕಾಗಿ ಅವರು ಮನವಿ ಮಾಡಿಕೊಂಡಿದ್ದಾರೆ.