ಸಿ.ಟಿ. ರವಿ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಎಸ್ಸೆಸ್ ಒತ್ತಾಯ

ದಾವಣಗೆರೆ, ಡಿ. 20- ಬೆಳಗಾವಿಯ ಸುವರ್ಣಸೌಧದಲ್ಲಿ ಪರಿಷತ್ ಕಲಾಪದ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಮಧ್ಯೆ ನಡೆದ ಮಾತಿನ ಚಕಮಕಿಯಲ್ಲಿ ರವಿ ಅವರು ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವುದನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಖಂಡಿಸಿದ್ದಾರೆ.

ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಸ್ಥಾನಮಾನ ಮತ್ತು ಗೌರವ ನೀಡಲಾಗಿದೆ. ನಾಲಿಗೆ ನಾಗರಿಕತೆ ಹೇಳುತ್ತದೆ. ಜನಪ್ರತಿನಿಧಿಗಳು ಸದನದ ಗೌರವ, ಘನತೆ ಕಾಪಾಡಬೇಕು. ಸದನದ ಒಳಗೆ ಹಾಗೂ ಹೊರಗೆ ಜನಪ್ರತಿನಿಧಿಗಳ ನಡವಳಿಕೆಗಳು ಇತರರಿಗೆ ಮಾದರಿಯಾಗಿರಬೇಕು. ಅಸಾಂವಿಧಾನಿಕ ಪದಬಳಕೆ ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆ. ಅವಾಚ್ಯ ಪದ ಬಳಕೆ ಮಾಡಿರುವುದನ್ನು ಅಖಿಲ ಭಾರತ ವೀರಶೈವ ಮಹಾಸಭಾ ತೀವ್ರವಾಗಿ ಖಂಡಿಸುತ್ತದೆ. ರವಿ ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

error: Content is protected !!