ಕನ್ನಡ ಶಿಕ್ಷಕರ ನೇಮಕಕ್ಕೆ ಆಗ್ರಹ
ದಾವಣಗೆರೆ ತಾಲ್ಲೂಕು ವಡ್ಡಿನಳ್ಳಿಯಲ್ಲಿರುವ ವಿಕಲಚೇತನರ ಶಾಲೆಯಲ್ಲಿ ಕನ್ನಡ ಶಿಕ್ಷಕರಿಲ್ಲ. ಕೇವಲ ಉತ್ತರ ಭಾರತೀಯ ಶಿಕ್ಷಕರಿರುವ ಈ ಶಾಲೆಗೆ ಒಂದು ವಾರದಲ್ಲಿ ಕನ್ನಡ ಶಿಕ್ಷಕರನ್ನು ನೇಮಿಸಬೇಕು. ಇಲ್ಲದಿದ್ದರೆ ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು.ಆವರಗೊಳ್ಳ ಕೇಂದ್ರೀಯ ವಿದ್ಯಾಲಯದಲ್ಲೂ ಕನ್ನಡ ಶಿಕ್ಷಕರಿಲ್ಲ. ಜಿಲ್ಲಾಧಿಕಾರಿಗಳು ಕೂಡಲೇ ಸಭೆ ನಡೆಸಿ ಕನ್ನಡ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ದಾವಣಗೆರೆ, ಡಿ.20- ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡರ ಬಣ) ಪಾದಚಾರಿ ವ್ಯಾಪಾರಿ ನಗರ ಘಟಕದಿಂದ 69ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃ ತಿಕ ವೈಭವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ನಾಳೆ ದಿನಾಂಕ 21ರ ಶನಿವಾರ ಹಮ್ಮಿಕೊಳ್ಳ ಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ತಿಳಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಡಾ. ಮೋದಿ ವೃತ್ತದಲ್ಲಿ ಸಂಜೆ 6.30ಕ್ಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸಮಾರಂಭ ಉದ್ಘಾಟಿಸಲಿದ್ದಾರೆ. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮೇಯರ್ ಚಮನ್ ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ್, ಆಯುಕ್ತರಾದ ರೇಣುಕಾ, ದೂಡ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಇತರರು ಆಗಮಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಗುವುದು. ದಾವಣಗೆರೆ ಫ್ರೆಂಡ್ಸ್ ಮೆಲೋಡಿ ಆರ್ಕೆಸ್ಟ್ರಾ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಿ.ರಾಘ ವೇಂದ್ರ, ಸುರೇಶ್, ಚಂದ್ರಶೇಖರ್, ಬಸಮ್ಮ, ಈಶ್ವರ್, ಮಲ್ಲಿಕಾರ್ಜುನ್, ಜಿ.ಎಸ್. ಸಂತೋಷ್, ಖಾದರ್ ಭಾಷಾ, ಆಟೋ ರಫೀಕ್ ಇತರರು ಉಪಸ್ಥಿತರಿದ್ದರು.