ಹರಿಹರ, ಡಿ. 20 – ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಹರಿಹರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಅವರ ಹುಟ್ಟುಹಬ್ಬ ಹಾಗೂ ಅಭಿನಂದನಾ ಸಮಾರಂಭವನ್ನು ನಾಳೆ ದಿನಾಂಕ 21 ರ ಶನಿವಾರ ಇಲ್ಲಿನ ರಾಘವೇಂದ್ರ ಸ್ವಾಮಿ ಮಠದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ನಂದಿಗಾವಿ ಶ್ರೀನಿವಾಸ್ ಅಭಿಮಾನಿ ಬಳಗದ ಅಧ್ಯಕ್ಷ ಕೆ.ಬಿ. ರಾಜಶೇಖರ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ನಗರಸಭೆ ಸದಸ್ಯ ಶಂಕರ್ ಖಟಾವ್ಕಾರ್ ಮಾತನಾಡಿ, ಈ ಕಾರ್ಯಕ್ರಮಕ್ಕೆ ಮಠಾಧೀಶರು, ಚರ್ಚ್ ಪಾದ್ರಿಗಳು ಹಾಗೂ ಶಂಶುದ್ದೀನ್ ಮೌಲಾನಾ, ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಸಂಸದೆ ಡಾ, ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಬಸವಂತಪ್ಪ, ಶಿವಗಂಗಾ ಬಸವರಾಜ್, ದೇವೇಂದ್ರಪ್ಪ, ಡಿ.ಜಿ.ಶಾಂತನಗೌಡ್ರು, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಮಾಜಿ ಶಾಸಕ ಎಸ್. ರಾಮಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್, ದೂಡ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಹರಿಹರ ತಾಲ್ಲೂಕು ಕಾಂಗ್ರೆಸ್ ಉಸ್ತುವಾರಿ ವಿಜಯಕುಮಾರ್ ಸೇರಿದಂತೆ, ಹಲವು ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ನಗರಸಭೆ ಸದಸ್ಯ ಅಬ್ದುಲ್ ಅಲಿಂ ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡ ರೇವಣಸಿದ್ದಪ್ಪ ಅಮರಾವತಿ, ಬಾಬುಲಾಲ್, ದಾದಾಪೀರ್ ಭಾನುವಳ್ಳಿ, ನಗರಸಭೆ ನಾಮ ನಿರ್ದೇಶನ ಸದಸ್ಯ ಸಂತೋಷ ದೊಡ್ಡಮನಿ, ಜಾಕೀರ್, ಆಶ್ರಯ ಸಮಿತಿ ಸದಸ್ಯೆ ಭಾಗ್ಯಮ್ಮ, ಕೆಡಿಪಿ ಸದಸ್ಯ ಗೋವಿನಾಳ ರಾಜಣ್ಣ, ಮಲ್ಲೇಶ್ ಕಮಲಾಪುರ, ಸಂತೋಷ ನೋಟದರ್, ದೇವರ ಬೆಳಕೇರಿ ಮಹೇಶ್ವರಪ್ಪ, ಸೇವಾದಳದ ಜಿ.ವಿ. ಪ್ರವೀಣ್, ಅಭಿದಾಲಿ, ಚಂದ್ರಪ್ಪ, ಮಂಜುನಾಥ್, ಗಣೇಶ ನಲ್ಲಿ, ಪುಷ್ಪಾ ಮಲೇಬೆನ್ನೂರು, ಐರಣಿಯಮ್ಮ, ನಜೀರ್, ಬಾವಿಕಟ್ಟಿ ಕರಿಬಸಪ್ಪ ಹಾಗೂ ಇತರರು ಹಾಜರಿದ್ದರು.