ನಾಡಿನ ಶ್ರೇಷ್ಠ ಕವಿಗೆ ರಾಷ್ಟ್ರಕವಿ ಪ್ರಶಸ್ತಿ ನೀಡಬೇಕು

ನಾಡಿನ ಶ್ರೇಷ್ಠ ಕವಿಗೆ  ರಾಷ್ಟ್ರಕವಿ ಪ್ರಶಸ್ತಿ ನೀಡಬೇಕು

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಒತ್ತಾಯ

ಮಂಡ್ಯ,ಡಿ.22- ಪ್ರತೀ ಐದು ವರ್ಷಕ್ಕೊಮ್ಮೆ ನಾಡಿನ ಶ್ರೇಷ್ಠ ಕವಿಯನ್ನು ಗುರುತಿಸಿ, ರಾಷ್ಟ್ರಕವಿ ಎಂದು ಪ್ರಶಸ್ತಿ ಪ್ರದಾನ ಮಾಡಬೇಕು ಎಂಬ ನಿರ್ಣಯವನ್ನು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳುವುದರ ಮೂಲಕ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್  ಆಗ್ರಹಿಸಿದೆ.

ಈ ಸಂಬಂಧ ಕಸಾಪ ದಾವಣಗೆರೆ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

ಸಮ್ಮೇಳನದಲ್ಲಿ ಕೈಗೊಳ್ಳುವ ನಿರ್ಣಯಗಳಲ್ಲಿ ತಾವು ಮಂಡಿಸುತ್ತಿರುವ ಹಕ್ಕೊತ್ತಾಯವನ್ನು ಸೇರ್ಪಡೆ ಮಾಡುವಂತೆ ವಾಮದೇವಪ್ಪ ಅವರು ಮನವಿಯಲ್ಲಿ ಕೇಳಿಕೊಂಡಿದ್ದಾರೆ.

ಅಲ್ಲದೇ, ದಾವಣಗೆರೆಯಲ್ಲಿ ರಾಜ್ಯ ಸರ್ಕಾರ ನಡೆಸಲು ಈ ಹಿಂದೆ ಕೈಗೊಂಡಿದ್ದ ತೀರ್ಮಾನದಂತೆ ವಿಶ್ವ ಕನ್ನಡ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅತಿ ಶೀಘ್ರದಲ್ಲಿ ನಡೆಸುವಂತೆ ಸರ್ಕಾರದ
ಮೇಲೆ ಒತ್ತಡ ತರಲು ನಿರ್ಣಯವನ್ನು ಕೈಗೊಳ್ಳಬೇಕು ಎಂದು ಅವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

error: Content is protected !!