ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಶೀಘ್ರ ನಡೆಸಲಿ

ದಾವಣಗೆರೆಯಲ್ಲಿ ವಿಶ್ವ ಕನ್ನಡ  ಸಾಹಿತ್ಯ ಸಮ್ಮೇಳನ ಶೀಘ್ರ ನಡೆಸಲಿ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ

ಮಂಡ್ಯ, ಡಿ. 22 – ಮಂಡ್ಯದಲ್ಲಿ ಜರುಗಿದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶ್ಯಾಧ್ಯಕ್ಷ ಡಾ. ಬಿ.ಎಂ. ಪಟೇಲ್ ಪಾಂಡು ಅವರು ಆರು ನಿರ್ಣಯಗಳನ್ನು ಮಂಡಿಸಿದರು.

p ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಎಲ್ಲಾ ಉಪ-ಬಂಧಗಳು ಮತ್ತು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮವು ಸಮಗ್ರವಾಗಿ ಜಾರಿಗೆ ಬರಬೇಕಿದ್ದು, ಕೂಡಲೇ ಅನುಷ್ಠಾನ ಆಗಬೇಕು. ಸ್ವಾಯತ್ತತೆ ಹೊಂದಿರುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರನ್ನು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ `ರಾಜ್ಯ ಮಟ್ಟದ ಸಮಿತಿಯ ಉಪಾಧ್ಯಕ್ಷರ ನ್ನಾಗಿ ನೇಮಕ ಮಾಡಲು ಸೂಕ್ತ ತಿದ್ದುಪಡಿ ತರಬೇಕು.

p ರಾಜ್ಯದಲ್ಲಿರುವ ಸರ್ಕಾರದ ಎಲ್ಲಾ ಕನ್ನಡ ಶಾಲೆಗಳಿಗೆ ಕಟ್ಟಡ, ವಾಚನಾಲಯ, ಆಟದ ಮೈದಾನ ಸೇರಿದಂತೆ ಇತರೆ ಮೂಲ ಸೌಕರ್ಯ ಗಳನ್ನು ಒದಗಿಸುವ ಮತ್ತು ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿಯ ಕ್ರಮಕ್ಕೆ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು. ಕನ್ನಡೇತರ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ಕಡ್ಡಾಯವಾಗಿ ನೇಮಕ ಮಾಡಬೇಕು.

p ಕನ್ನಡ ಅನ್ನದ ಭಾಷೆಯಾಗಲು ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸರ್ಕಾರ ಸಮರ್ಪಕ ವಾಗಿ ಎದುರಿಸಬೇಕು. ಸರೋಜಿನಿ ಮಹಿಷಿ ವರದಿಯನ್ನು  ಶಾಸನಬದ್ಧ ಗೊಳಿಸಿ ಅನುಷ್ಠಾನಗೊಳಿಸಬೇಕು.

p ದಾವಣಗೆರೆಯಲ್ಲಿ ನಡೆಯಬೇ ಕಿರುವ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಅತಿ ಶೀಘ್ರದಲ್ಲಿ ನಡೆಸಬೇಕು.

p ಕರ್ನಾಟಕ ಸರ್ಕಾರವು ರಾಷ್ಟ್ರಕವಿಯನ್ನು ಅತಿ ಶೀಘ್ರದಲ್ಲಿ ಘೋಷಿಸಬೇಕು. 

p ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಯಶಸ್ವಿಗೊಳಿಸಲು ಕಾರಣರಾದ ಸ್ವಾಗತ ಸಮಿತಿಯ ಅಧ್ಯಕ್ಷರಾದಿಯಾಗಿ ಎಲ್ಲ ಸದಸ್ಯರಿಗೂ ಹೃತೂರ್ವಕ ಕೃತಜ್ಞತೆಗಳು.

 ಈ ಸಂದರ್ಭದಲ್ಲಿ ರಾಜ್ಯ ಕಾರ್ಯ ಸಮಿತಿಯ ಸರ್ವ ಸದಸ್ಯರು ವೇದಿಕೆಯ ಮೇಲಿದ್ದು, ಸರ್ವ ಕನ್ನಡಿಗರ ಸಹ ಮತದೊಂದಿಗೆ ಅವರು ಸಹ ಒಪ್ಪಿಗೆಯ ಧ್ವನಿಗೂಡಿಸಿದರು ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಅವರು ತಿಳಿಸಿದ್ದಾರೆ. 

ಆರು ನಿರ್ಣಯಗಳಲ್ಲಿ ದಾವಣಗೆರೆಯಲ್ಲಿ ರಾಜ್ಯ ಸರ್ಕಾರ ನಡೆಸಲುದ್ದೇಶಿಸಿರುವ ವಿಶ್ವ ಕನ್ನಡ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅತಿ ಶೀಘ್ರದಲ್ಲಿ ನಡೆಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ನಿರ್ಣಯವನ್ನು ಕೈಗೊಳ್ಳಲಾಗಿದೆ. 

ಈ ನಿರ್ಣಯವನ್ನು ಕೈಗೊಂಡಿರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಅವರಿಗೂ, ಕಾರ್ಯಕಾರಿ ಸಮಿತಿ ಎಲ್ಲಾ ಸದಸ್ಯರಿಗೂ..  ಒಪ್ಪಿಗೆಯನ್ನು ಸೂಚಿಸಿದ ಸರ್ವರಿಗೂ ಕಸಾಪ ದಾವಣಗೆರೆ ಜಿಲ್ಲಾಧ್ಯಕ್ಷ    ವಾಮದೇವಪ್ಪ ಧನ್ಯವಾದ ತಿಳಿಸಿದ್ದಾರೆ.

error: Content is protected !!