ದಾವಣಗೆರೆ, ಡಿ.24- ನಗರದ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ನಾಳೆ ದಿನಾಂಕ 25ರಿಂದ 28ರ ವರೆಗೆ ಸಂಸ್ಥೆಯ 55ನೇ ವಾರ್ಷಿಕ ಸಂಭ್ರಮಾಚರಣೆ ನಾಲ್ಕು ದಿನಗಳ ಕಾಲ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ಜಸ್ಟಿನ್ ಡಿಸೋಜಾ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ದಿನಾಂಕ 25ರ ಇಂದು ಸಂಜೆ 5.30ಕ್ಕೆ ಮನೋವೈದ್ಯ ಪದ್ಮಶ್ರೀ ಡಾ.ಸಿ.ಆರ್. ಚಂದ್ರಶೇಖರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು ಎಂದು ಹೇಳಿದರು. ಇದೇ ವೇಳೆ ರಾಜ್ಯಮಟ್ಟದ ಪ್ರತಿಷ್ಠಿತ ಎಂ.ಎಸ್.ಎಸ್ ಕ್ವಿಜ್ ವಿಜೇತರಣೆ, 2024ನೇ ಸಾಲಿನ 10ನೇ ತರಗತಿ ಸ್ಟೇಟ್ ಮತ್ತು ಸಿಬಿಎಸ್ಇ ಬೋರ್ಡ್ ಪರೀಕ್ಷೆಯಲ್ಲಿ 90ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ `ಸಿದ್ಧಗಂಗಾ ಪ್ರತಿಭಾ ಪುರಸ್ಕಾರ’ ಮತ್ತು ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಡಿ.ಎಸ್ ಹೇಮಂತ್, ನಿರ್ದೇಶಕ ಡಾ. ಜಯಂತ್, ಕಾಲೇಜಿನ ಪ್ರಾಚಾರ್ಯೆ ವಾಣಿಶ್ರೀ, ಸಿ.ಬಿ.ಎಸ್.ಇ ಪ್ರಾಚಾರ್ಯೆ ಗಾಯತ್ರಿ ಚಿಮ್ಮಡ್, ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಕೆ.ಎಸ್ ರೇಖಾರಾಣಿ ಹಾಗೂ ರಾಮ್ ಮನೋಹರ್ ಇದ್ದರು.