ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸವಿತಾ ಹುಲ್ಲುಮನೆ ಗಣೇಶ್

ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸವಿತಾ ಹುಲ್ಲುಮನೆ ಗಣೇಶ್

ದಾವಣಗೆರೆ, ಡಿ. 26 – ಮಹಾನಗರ ಪಾಲಿಕೆ ವತಿಯಿಂದ ಕೈಗೊಂಡಿರುವ ವಿವಿಧ ಪಾದಚಾರಿ ಮಾರ್ಗಗಳನ್ನು ಮತ್ತು ರಸ್ತೆ ನಿರ್ಮಾಣ ಅಭಿವೃದ್ಧಿ ಕಾಮಗಾರಿಗಳನ್ನು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಸವಿತಾ ಹುಲ್ಲುಮನೆ ಗಣೇಶ್ ಅವರು ಇಂದು ಪರಿಶೀಲನೆ ನೆಡೆಸಿದರು. 

ವಿವಿಧ ಮುಖ್ಯ ರಸ್ತೆಗಳಲ್ಲಿ ಪಾದಚಾರಿ ನಿರ್ಮಾಣ ಕಾಮಗಾರಿಗಳಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ, ಸಂಚಾರ ದಟ್ಟಣೆ ಸಹ ಹೆಚ್ಚಾಗಿದೆ. ಇದರಿಂದ ಅಪಘಾತಗಳು ಆಗಬಹುದು. ಹಾಗಾಗಿ ಆದಷ್ಟು ಬೇಗನೆ ಕಾಮಗಾರಿಗಳನ್ನು ಪೂರೈಸಲು ಕ್ರಮವಹಿಸಲು ಅಧಿಕಾರಿಗಳಿಗೆ ಸವಿತಾ ಸೂಚಿಸಿದರು. 

ಆವರಗೆರೆ ಪಿ. ಬಸವನಗೌಡ ಬಡಾವಣೆಯ ಸಾರ್ವಜನಿಕರು ಶೌಚಾಲಯ ನಿರ್ಮಾಣಕ್ಕೆ ಸಲ್ಲಿಸಿದ ಮನವಿ ಮೇರೆಗೆ ಸಮುದಾಯ ಶೌಚಾಲಯ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಹಾಜರಿದ್ದ, ಸಿವಿಲ್ ಕಾಮಗಾರಿಗಳನ್ನು ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

error: Content is protected !!