ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಎಐಡಿಎಸ್‌ಓ ಆಗ್ರ

ದಾವಣಗೆರೆ, ಡಿ.26- ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ 10ನೇ ತರಗತಿ ಓದುತ್ತಿದ್ದ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಹೇಯ ಘಟನೆಯನ್ನು ಎಐಡಿಎಸ್‌ಓ ಅತ್ಯುಗ್ರವಾಗಿ ಖಂಡಿಸುತ್ತದೆ.

ಈ ಕುರಿತು ದೂರು ನೀಡಿದ್ದರೂ ಯಾವ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ. ಇದರಿಂದ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಾತಿ ಕಾರಣಕ್ಕೆ ಮನುಷ್ಯನೊಬ್ಬನನ್ನು ಅತ್ಯಂತ ಅಮಾನವೀಯವಾಗಿ ನಡೆಸಿಕೊಂಡ ಈ ಘಟನೆ ಸಮಾಜದಲ್ಲಿನ ಕರಾಳತೆಗೆ ಮತ್ತು ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಈ ಘಟನೆಯಲ್ಲಿನ ತಪ್ಪಿತಸ್ಥರಿಗೆ ಕೂಡಲೇ ಉಗ್ರ ಶಿಕ್ಷೆ ವಿಧಿಸುವಂತೆ ಎಐಡಿಎಸ್‌ಓ ಸರ್ಕಾರಕ್ಕೆ ಒತ್ತಾಯಿಸಿದೆ ಎಂದು ಜಿಲ್ಲಾ ಕಾರ್ಯದರ್ಶಿ ಟಿ.ಎಸ್‌. ಸುಮನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!