ದಾವಣಗೆರೆ, ಡಿ. 26- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಾಡಿದ್ದು ದಿನಾಂಕ 28ರಿಂದ ಜನವರಿ 1ರ ವರೆಗೆ ಇಲ್ಲಿನ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
ನಾಡಿದ್ದು ದಿನಾಂಕ 28ರ ಸಂಜೆ 5 ಗಂಟೆಗೆ ಗಾಜಿನ ಮನೆಯಲ್ಲಿ ಫಲಪುಷ್ಪ ಕಾರ್ಯಕ್ರಮವನ್ನು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಉದ್ಘಾಟಿಸಲಿದ್ದು, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.