ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತ ಪ್ರೌಢಶಾಲೆಯಲ್ಲಿ ಇಂದು ಮತ್ತು ನಾಳೆ ಶಾಲಾ ವಾರ್ಷಿಕ ಸಂಭ್ರಮ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.
ಇಂದು ಸಾಂಸ್ಕೃತಿಕ ಉತ್ಸವ ನಡೆಯಲಿದ್ದು, ಈಶ್ವರಮ್ಮ ಶಾಲಾಡಳಿತ ಮಂಡಳಿ ಕಾರ್ಯದರ್ಶಿ ಉಷಾ ರಂಗನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಟಿ.ಎನ್.ಕವಿತಾ, ಈಶ್ವರಮ್ಮ ಶಾಲಾಡಳಿತ ಮಂಡಳಿ ಅಧ್ಯಕ್ಷೆ ಕೆ.ಆರ್. ಸುಜಾತಕೃಷ್ಣ, ಖಜಾಂಚಿ ಎ.ಪಿ. ಸುಜಾತಾ, ಸಂಚಾಲಕ ಪಾಂಡುರಂಗರಾವ್ ರೇವಣಕರ್, ಪ್ರಾಂಶುಪಾಲ ಕೆ.ಎಸ್. ಪ್ರಭುಕುಮಾರ್, ಉಪಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ ಭಾಗವಹಿಸಲಿದ್ದಾರೆ.