ನಗರದಲ್ಲಿ ಇಂದು ಕನ್ನಡ ರಾಜ್ಯೋತ್ಸವ – ಸಾಂಸ್ಕೃತಿಕ ಕಾರ್ಯಕ್ರಮ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕನ್ನಡ ಕ್ರಿಯಾ ಸಮಿತಿ ದಾವಣಗೆರೆ ವಿಭಾಗ ಇವರ ವತಿಯಿಂದ ವಿಭಾಗ ಮಟ್ಟದ 69ನೇ ಕನ್ನಡ ರಾಜ್ಯೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕನಸಿನ ಕಡಲು ಕೃತಿ ಲೋಕಾರ್ಪಣೆ ಹಾಗೂ ಗ್ರಂಥಾಲಯ ಉದ್ಘಾಟನೆ ಕಾರ್ಯಕ್ರಮವನ್ನು ಇಂದು ಸಂಜೆ 5ಗಂಟೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಪುನೀತ್ ರಾಜಕುಮಾರ್ ಅವರ ವೇದಿಕೆಯಲ್ಲಿ ನಡೆಯುವ ಸಮಾರಂಭದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ನೆರವೇರಿಸಲಿದ್ದು, ವಿಭಾಗೀಯ ನಿಯಂತ್ರಣ ಅಧಿಕಾರಿ ಸಿದ್ದೇಶ್ವರ್ ಹೆಬ್ಬಾಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಗ್ರಂಥಾಲಯ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಕನಸಿನ ಕಡಲು ಕೃತಿ ಲೋಕಾರ್ಪಣೆ ಮಾಡುವರು. 

ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ರಾಜ್ಯಾಧ್ಯಕ್ಷ ನಾಡೋಜ ಮನು ಬಳಿಗಾರ, ಸಾಹಿತಿ ಆನಂದ್ ಋಗ್ವೇದಿ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

error: Content is protected !!