ದಾವಣಗೆರೆ, ಡಿ. 27 – ನಗರದ ಹದಡಿ ರಸ್ತೆಯ ಬೀದಿ ಬದಿಯ ವ್ಯಾಪಾರಸ್ಥರನ್ನು ಏಕಾಏಕಿ ತೆರವುಗೊಳಿಸಿದ್ದು, ಇದರಿಂದ ಸಣ್ಣ ಪುಟ್ಟ ಬೀದಿ ಬದಿ ವ್ಯಾಪಾರಿಗಳಿಗೆ ತುಂಬಾ ತೊಂದರೆಯಾಗಿದೆ ಎಂದು ಜಿಲ್ಲಾ ಬೀದಿ ಬದಿಯ ಸ್ಥಿರ ಮತ್ತು ಸಂಚಾರಿ ಚಿಲ್ಲರೆ ವ್ಯಾಪಾರಸ್ಥರ ಕ್ಷೇಮಾಭಿೃದ್ಧಿ ಸಂಘದ ಜಿಲ್ಲಾಧ್ಯಕ್ಷ ಎಸ್. ಇಸ್ಮಾಯಿಲ್ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ಗುರುತಿಸಿರುವಂತೆ 13000 ಬೀದಿ ಬದಿಯ ವ್ಯಾಪಾರಿಗಳು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಬೀದಿ ಬದಿಯಲ್ಲಿ ವ್ಯಾಪಾರಸ್ಥರನ್ನು ಏಕಾಏಕಿಯಾಗಿ ತೆರವುಗೊಳಿಸಿದೆ. ಇದರಿಂದ ಸಣ್ಣಪುಟ್ಟ ಬೀದಿ ಬದಿ ವ್ಯಾಪಾರಸ್ಥರಿಗೆ ತೊಂದರೆಯಾಗಿದೆ. ಇದಕ್ಕೆ ಪಾಲಿಕೆಯು ಕೆಲ ಕಾರಣಗಳನ್ನು ನೀಡಿದ್ದಾರೆ. ಹದಡಿ ರಸ್ತೆ, ಶಾಮನೂರು ರಸ್ತೆ ಹಾಗೂ ಡೆಂಟಲ್ ಕಾಲೇಜು ರಸ್ತೆಗೆ ಸಂಬಂಧಪಟ್ಟಂತೆ ಹೇಕೋರ್ಟ್ ನ ಲೋಕಾಯುಕ್ತರಿದಂದ ಪಾಲಿಕೆ ವಿರುದ್ಧ ಕೇಸ್ ದಾಖಲಾಗಿದ್ದು, ಇದಕ್ಕೆ ಅಲ್ಲಿರುವ ವ್ಯಾಪಾರಸ್ಥರನ್ನು ತೆರವುಗೊಳಿಸಲು ಅನಿವಾರ್ಯ ಎಂದಿದ್ದಾರೆ. ಆದರೆ ಯಾವುದೇ ಮುನ್ಸೂಚನೆ ನೀಡದೆ ಹಾಗೂ ಬಹುಮುಖ್ಯವಾಗಿ ಒಕ್ಕಲೆಬ್ಬಿಸುವ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಸ್.ಕೆ. ರೆಹಮತ್‌ವುಲ್ಲಾ, ಕೆ. ಭಾರತಿ, ಡಿ. ಮಂಜುಳಾ, ಅಲ್ಲಾಬಕ್ಷಿ, ಧರ್ಮಣ್ಣ, ಮಂಜುನಾಥ ಕೈದಾಳೆ ಮತ್ತಿತರರಿದ್ದರು.