ಬೆಂಗಳೂರು, ಡಿ. 3- ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರನ್ನು ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಇಂದು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಯವರೂ ಸಹ ಶುಕ್ರವಾರ ಆಸ್ಪತ್ರೆಯಲ್ಲಿ ಶಾಮನೂರು ಶಿವಶಂಕರಪ್ಪನವರ ಕುಶಲೋಪರಿ ವಿಚಾರಿಸಿ, ಶೀಘ್ರ ಗುಣಮುಖರಾಗಲೆಂದು ಹಾರೈಸಿ, ಆಶೀರ್ವದಿಸಿದರು.
January 8, 2025