ಗ್ಯಾರಂಟಿ ಸಮರ್ಪಕ ಅನುಷ್ಟಾನ, ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ಧಿ ಸಾಧ್ಯ

ಗ್ಯಾರಂಟಿ ಸಮರ್ಪಕ ಅನುಷ್ಟಾನ, ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ಧಿ ಸಾಧ್ಯ

ಎಂಸಿಸಿ ಬಿ ಬ್ಲಾಕ್ ನಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಮೇಯರ್ ಕೆ. ಚಮನ್ ಸಾಬ್

ದಾವಣಗೆರೆ, ಜ. 6 – ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿ ಕಾಂಗ್ರೆಸ್‌ ನಿಂದ ಮಾತ್ರ ಸಾಧ್ಯ. ಈ ಹಿಂದೆ ಆಡಳಿತ ನಡೆಸಿದವರು ಅಭಿವೃದ್ಧಿ ಮಾಡದೇ ಕಾಲ ಹರಣ ಮಾಡಿದರು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿ ಜೊತೆಗೆ, ಅಭಿವೃದ್ಧಿಯ ಕೆಲಸಗಳಿಗೂ ವೇಗ ಸಿಕ್ಕಿದೆ ಎಂದು ಮಹಾನಗರ ಪಾಲಿಕೆ ಮೇಯರ್ ಕೆ. ಚಮನ್ ಸಾಬ್ ತಿಳಿಸಿದರು. 

ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರ ದೂರದೃಷ್ಟಿತ್ವದಿಂದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ. ಮಾರ್ಗದರ್ಶನ ಹಾಗೂ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆತಿದೆ ಎಂದು ಹೇಳಿದರು. 

ಗ್ಯಾರಂಟಿ ಯೋಜನೆಗಳು ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದವರಿಗೆ ಲಭಿಸಿದೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸುವ ಕೆಲಸ ನಡೆಯುತ್ತಿದೆ. ಮತ್ತೆ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ, ಗುಣಮಟ್ಟದ ಕೆಲಸ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. 

ಈ ವೇಳೆ ಮಾತನಾಡಿದ ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ದಾವಣಗೆರೆಯಲ್ಲಿ ಅಭಿವೃದ್ಧಿ ಕಾರ್ಯಗಳೇ ಸ್ಥಗಿತಗೊಂಡಿದ್ದವು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಾಕಷ್ಟು ಅನುದಾನ ತರುತ್ತಿದ್ದಾರೆ. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರೂ ಸಹ ಕೇಂದ್ರ ಯೋಜನೆಗಳ ಜಾರಿ, ಜನರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಅಭಿವೃದ್ಧಿ ಕಾರ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಇದು ಒಳ್ಳೆಯ ಬೆಳವಣಿಗೆ ಎಂದು ಹೇಳಿದರು. 

ಪಾಲಿಕೆ ವ್ಯಾಪ್ತಿ ಮಾತ್ರವಲ್ಲ, ಜಿಲ್ಲೆಯಾದ್ಯಂತವೂ ಅಭಿವೃದ್ಧಿ ಕಾರ್ಯಗಳಿಗೆ ಒಂದೊಂದಾಗಿಯೇ ಚಾಲನೆ ದೊರಕುತ್ತಿದೆ. 

ಪ್ರಭಾ ಮಲ್ಲಿಕಾರ್ಜುನ್ ಅವರು ರಾಷ್ಟ್ರೀಯ ಹೆದ್ದಾರಿ, ನೀರಾವರಿ, ರೈಲ್ವೆ ಯೋಜನೆಗಳಿಗೆ ಕೇಂದ್ರದಿಂದ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪರ ಆಶೀರ್ವಾದದಿಂದ ಸಚಿವರು ಹಾಗೂ ಸಂಸದರ ಅಭಿವೃದ್ಧಿಯ ಬದ್ಧತೆಯಿಂದ ಇದೆಲ್ಲಾ ಸಾಧ್ಯವಾಗುತ್ತಿದೆ ಎಂದು ಅಭಿಪ್ರಾಯಪಟ್ಟರು. 

ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸವಿತಾ ಗಣೇಶ್ ಹುಲ್ಲುಮನಿ, ಪಾಲಿಕೆ ಸದಸ್ಯ ಎ. ನಾಗರಾಜ್, ಗುರುಮೂರ್ತಿ, ಅಂದನೂರು ಮುಪ್ಪಣ್ಣ, ಪ್ರಕಾಶ್, ದೊಗ್ಗಳ್ಳಿ ಶಿವಕುಮಾರ್, ಗಣೇಶ್ ಹುಲ್ಲುಮನಿ, ಲಿಂಗನಗೌಡರು, ಸತ್ಯನಾರಾಯಣ್, ಮಲ್ಲಿಕಾರ್ಜುನ್, ಚನ್ನಪ್ಪ, ಇಂದುಧರ್ ನಿಶಾನಿಮಠ್, ವಿಜಯಣ್ಣ ಆಲೂರು, ಮೇಲ್ಮನೆ ಅರುಣ್, ಗೌತಮ್, ಯಶೋಧ, ಸರೋಜಕ್ಕ, ರುದ್ರೇಶ್, ವೀರೇಶ್ ಪಾಟೀಲ್, ಶೌಕತ್, ಮುರುಗೇಶ್ವರ್, ನಿಖಿಲ್, ಕೈದಾಳೆ ರಾಜು, ಪ್ರಕಾಶ್ ಬಾಡ, ನಿವೃತ್ತ ಎಸ್ಪಿ ರವಿ ನಾರಾಯಣ್, ಆರ್‌ಟಿಒ ರಾಜು, ಹುಲ್ಲುಮನಿ ಗಣೇಶ್, ಬೆಳ್ಳೂಡಿ ಉಮೇಶ್ ಮತ್ತಿತರರು ಹಾಜರಿದ್ದರು.

error: Content is protected !!