ದಾವಣಗೆರೆ, ಜ. 7 – ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಭತ್ಯೆ ನೀಡಲು ಅರ್ಹ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ 46, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ರಸ್ತೆ, ದಾವಣಗೆರೆ – 577006 ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಇದೇ ದಿನಾಂಕ 18 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
February 5, 2025