ದಾವಣಗೆರೆ, ಜ. 8 – ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಶಾಲಾ ಶಿಕ್ಷಣ ಇಲಾಖೆ, ದಾವಣಗೆರೆ ದಕ್ಷಿಣ ವಲಯದ ಆಶ್ರಯದಲ್ಲಿ 2024-25ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವು ನಗರದ ಬಿಇಎ ಪ್ರೌಢ ಶಾಲೆಯಲ್ಲಿ ಕಳೆದ ವಾರ ನಡೆಯಿತು. ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದ ಅಣಬೇರು ಗ್ರಾಮದ ಕನಕ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ತಾಜ್ ಶೌಕತ್ ಅಲಿ ವೈಯಕ್ತಿಕ ವಿಭಾಗದ ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
January 10, 2025