ಜಗಳೂರು, ಜ. 10- ತಾಲ್ಲೂಕಿನ ಪಲ್ಲಾಗಟ್ಟೆಯ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ 25ನೇ ವರ್ಷದ ಶಬರಿಮಲೈ ಯಾತ್ರೆ ಪ್ರಯುಕ್ತ ಅಯ್ಯಪ್ಪ ಸ್ವಾಮಿ ಪಡಿ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ನಾಡಿದ್ದು ದಿನಾಂಕ 12ರ ಭಾನುವಾರ ಸಂಜೆ 6 ಗಂಟೆಗೆ ಗ್ರಾಮದ ಎಲ್‌ಐಸಿ ರಂಗಮಂದಿರದಲ್ಲಿ ನಡೆಸಲಾಗುವುದು ಎಂದು ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ತಿಳಿಸಿದೆ.
ಅಂದು ಸಂಜೆ 4 ಗಂಟೆಗೆ ಅಯ್ಯಪ್ಪಸ್ವಾಮಿ ಮೂರ್ತಿಯ ಅದ್ಧೂರಿ ಮೆರವಣಿಗೆಯನ್ನು ನಡೆಸಲಾಗುವುದು. ಸಂಜೆ 6 ಗಂಟೆಗೆ ವಿಶೇಷ ಹೂವಿನ ಅಲಂಕಾರದೊಂದಿಗೆ ಪಡಿಪೂಜೆ ನಂತರ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಲಿದೆ. ಪೂಜೆಯ ನಂತರ ಹರಪನಹಳ್ಳಿ ತಾಲ್ಲೂಕು ಹೊಸಕೋಟೆ ಗ್ರಾಮದ ಕಲ್ಲೇಶ್ವರ ಭಜನ ಮಂಡಳಿ ವತಿಯಿಂದ ಭಜನೆ ಕಾರ್ಯಕ್ರಮ ಆಯೋಜಿಸಲಾಗಿದೆ.
ದಿನಾಂಕ 13ರ ಸೋಮವಾರ ಸಂಜೆ 6 ಗಂಟೆಗೆ ಶಬರಿಮಲೈ ಯಾತ್ರೆ ಪ್ರಾರಂಭವಾಗಲಿದೆ. ಕಳೆದ 25 ವರ್ಷಗಳ ಹಿಂದೆ 2000ನೇ ಇಸವಿಯಿಂದ ಪ್ರಾರಂಭವಾದ ಶಬರಿ ಮಲೈ ಯಾತ್ರೆ ಯಶಸ್ವೀ 24 ವರ್ಷ ಪೂರೈಸಿ 25ನೇ ವರ್ಷಕ್ಕೆ ಪಾದಾರ್ಪಣೆ ಮಾಡಲು ಪಲ್ಲಾಗಟ್ಟೆ ಗ್ರಾಮಸ್ಥರು, ಅಕ್ಕಪಕ್ಕದ ಗ್ರಾಮಸ್ಥರು ಸಹಕರಿಸಿದ್ದಾರೆ.